ನಾಡ ಹಬ್ಬ ದಸರಾ ಆಚರಿಸುವಾಗ ಕೊರೊನ ಸೋಂಕು ಹರಡದಂತೆ ವಹಿಸಬೇಕಾದ ಸುರಕ್ಷಾ ಕ್ರಮಗಳ ಬಗ್ಗೆ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚರ್ಚೆ ನಡೆಸಲಾಯಿತು. ಅರಮನೆ ಹಾಗೂ ಚಾಮುಂಡಿ ಬೆಟ್ಟಕ್ಕೆ ಸೀಮಿತವಾಗಿ ದಸರಾ ಆಚರಿಸಬೇಕೆಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. ಹೀಗಾಗಿ ಕೊರೋನಾನ ಸಂಕಷ್ಟದ ನಡುವೆಯೂ ನಡೆಯುತ್ತಿರುವಂತ ಮೈಸೂರು ದಸರಾ ಆಚರಣೆ ಅರಮನೆ ಹಾಗೂ ಚಾಮುಂಡಿ ಬೆಟ್ಟಕ್ಕೆ ಮಾತ್ರವೇ ಸೀಮಿತವಾಗಿರುತ್ತದೆ ಎಂಬುದಾಗಿ ಆರೋಗ್ಯ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.
ಮೈಸೂರಿನಲ್ಲಿ ನಾಡ ಹಬ್ಬ ದಸರಾ ಆಚರಿಸುವಾಗ ಕೊರೊನ ಸೋಂಕು ಹರಡದಂತೆ ವಹಿಸಬೇಕಾದ ಸುರಕ್ಷಾ ಕ್ರಮಗಳ ಬಗ್ಗೆ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚರ್ಚೆ ನಡೆಸಲಾಯಿತು.
ಅರಮನೆ ಹಾಗೂ ಚಾಮುಂಡಿ ಬೆಟ್ಟಕ್ಕೆ ಸೀಮಿತವಾಗಿ ದಸರಾ ಆಚರಿಸಬೇಕೆಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.
ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ನಾಡ ಹಬ್ಬ ದಸರಾ ಆಚರಣೆ ಬಗ್ಗೆ ಇಂದು ಮಹತ್ವದ ಸಮಿತಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಕೊರೋನಾ ಮುಂಜಾಗ್ರತಾ ಕ್ರಮಗಳೊಂದಿಗೆ ದಸರಾ ಹಬ್ಬ ಆಚರಣೆ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ, ಒಂದು ದಿನದೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಯಿತು. ನಾಡಹಬ್ಬದ ಆಚರಣೆಯ ರೂಪುರೇಷೆಗಳನ್ನು ತಾಂತ್ರಿಕ ತಜ್ಞರ ಸಮಿತಿ ರೂಪಿಸಲಿದ್ದು, ಈ ಎಲ್ಲ ವಿಚಾರಗಳನ್ನು ಸಿಎಂ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.
ಈ ಬಗ್ಗೆ, ಒಂದು ದಿನದೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಯಿತು. ನಾಡಹಬ್ಬದ ಆಚರಣೆಯ ರೂಪುರೇಷೆಗಳನ್ನು ತಾಂತ್ರಿಕ ತಜ್ಞರ ಸಮಿತಿ ರೂಪಿಸಲಿದ್ದು, ಈ ಎಲ್ಲ ವಿಚಾರಗಳನ್ನು ಮಾನ್ಯ @CMofKarnataka ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು.
— B Sriramulu (@sriramulubjp)
ಈ ಸಭೆಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಸಂಸದರು, ಹಿರಿಯ ನಾಯಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಸರಳ, ಸುರಕ್ಷಿತ ಮತ್ತು ಸಂಭ್ರಮದ ದಸರಾ ಆಚರಣೆಯೇ ಸರ್ಕಾರದ ಆದ್ಯತೆಯಾಗಿದೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.