ಅರಸೀಕೆರೆ ಮನುಷ್ಯನ ಅಂತ್ಯಕ್ರಿಯೆ ನಡೆಯುವ ಜಾಗ ಗಿಡಗಂಟೆಗಳಿಂದ ತುಂಬಿಕೊಂಡಿತ್ತು ನಗರಸಭೆ ಆಗಲಿ ಕ್ಷೇತ್ರದ ಶಾಸಕರಾಗಲಿ ಇದರ ಬಗ್ಗೆ ಗಮನ ಹರಿಸಿಲ್ಲ ಆದ್ದರಿಂದ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಭಾರತೀಯ ಜನತಾ ಪಾರ್ಟಿಯ ಗ್ರಾಮಾಂತರ ಉಪಾಧ್ಯಕ್ಷ ವಿಜಯ ಕುಮಾರ್ ಅಭಿಪ್ರಾಯಪಟ್ಟರು
ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಳೆದ 24ದಿನಗಳಿಂದ ಸ್ವಚ್ಛತಾ ಕಾರ್ಯ ತಾಲೂಕಿನಾದ್ಯಂತ ಮಾಡುತ್ತಲೆ ಬರುತ್ತಿದ್ದೇವೆ ಇಂದು ಕೂಡ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಸುಮಾರು 10 ಜೆಸಿಬಿ ಮತ್ತು 5 ಟ್ರ್ಯಾಕ್ಟರ್ ಗಳ ಮುಖಾಂತರ ಸ್ವಚ್ಛತಾ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಹೇಳಿದರು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಪುರುಷೋತ್ತಮ್ ಅಲ್ಪಸಂಖ್ಯಾತರ ಘಟಕದ ನಗರ ಅಧ್ಯಕ್ಷ ವಿನೋದ್ ಜೈನ್ ,ನಗರ ಬಿಜೆಪಿ ಖಜಾಂಚಿ ನಿರ್ಮಲ್ ಜೈನ್, ರಾಹುಲ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.