ಉ.ಪ್ರ: ಹದಿಹರೆಯದ ಬಾಲಕಿಯ ಶವ ಹೊಲದಲ್ಲಿ ಪತ್ತೆ: ಅತ್ಯಾಚಾರ ನಡೆದಿರುವುದಾಗಿ ಕುಟುಂಬದ ಆರೋಪ

0

ಹತ್ರಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ದಿನೇದಿನೇ ಹೆಚ್ಚುತ್ತಿರುವ ಕಾವಿನ ನಡುವೆಯೇ ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯ ಗ್ರಾಮವೊಂದರಲ್ಲಿ 17ರ ಹರೆಯದ ಬಾಲಕಿಯ ಮೃತದೇಹ ಪತ್ತೆಯಾಗಿದ್ದು, ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲ್ಲಲಾಗಿದೆ ಎಂದು ಕುಟುಂಬಿಕರು ಆರೋಪಿಸಿದ್ದಾರೆ.

ಬುಧವಾರ ರಾತ್ರಿ ಗ್ರಾಮದ ಹೊಲವೊಂದರಲ್ಲಿ ಯುವತಿಯ ಶವ ಪತ್ತೆಯಾಗಿದೆ. ಆಕೆಯನ್ನು ಉಸಿರುಗಟ್ಟಿಸಿ ಕೊಂದಿರುವಂತೆ ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಎಸ್‌ಪಿ ಪ್ರಶಾಂತ ವರ್ಮಾ ಅವರು ಗುರುವಾರ ಇಲ್ಲಿ ತಿಳಿಸಿದರು.

ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲ್ಲಲಾಗಿದೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಇದು ದೃಢಪಡಬೇಕಿದೆ ಎಂದರು.

ಯುವತಿಯ ಕುಟುಂಬದ ದೂರಿನ ಮೇರೆಗೆ ಪೊಲೀಸರು ನೆರೆಯ ಗ್ರಾಮದ ಆದಿತ್ಯ ರೈ ದಾಸ್ (23) ಎಂಬಾತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಘಟನೆಯಿಂದಾಗಿ ಗ್ರಾಮದಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿದೆಯಾದರೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಭಾರೀ ಪೊಲೀಸ್ ಬಂದೋಬಸ್ತ್‌ನ್ನು ಏರ್ಪಡಿಸಲಾಗಿದೆ ಎಂದೂ ವರ್ಮಾ ತಿಳಿಸಿದರು.

LEAVE A REPLY

Please enter your comment!
Please enter your name here