ಎಚ್ಚರ..ಎಚ್ಚರ..! : ಈ ಹತ್ತು ಜಿಲ್ಲೆಗಳಲ್ಲಿ ಹೆಚ್ಚಾಗುತ್ತಿದೆ ಕಿಲ್ಲರ್ ‘ಕೊರೊನಾ ಸೋಂಕು’ ಅಟ್ಟಹಾಸ

0

ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರೆದಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚಳವಾಗುತ್ತಿದೆ.

ಈ ಹಿನ್ನೆಲೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾಗಿರುವ ಹತ್ತು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿ.ಇ.ಒಗಳೊಂದಿಗೆ ಅವರು ವೀಡಿಯೋ ಸಂವಾದ ನಡೆಸಿ ಬಳಿಕ ಮಾತನಾಡಿದರು.

ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗಿರುವ ಬಳ್ಳಾರಿ, ಹಾಸನ. ಧಾರವಾಡ, ಬೆಳಗಾವಿ, ಮೈಸೂರು. ಶಿವಮೊಗ್ಗ, ತುಮಕೂರು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್ 19 ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕಗಳನ್ನು ಪತ್ತೆ ಹಚ್ಚಿ, ನಿಗದಿತ ಪರೀಕ್ಷೆಗಳನ್ನು ಮಾಡಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಸಾಂಕ್ರಾಮಿಕ ರೋಗ ತಡೆ ಹಾಗೂ ಸಾವಿನ ಪ್ರಮಾಣ ತಡೆಯಲು ಹೆಚ್ಚಿನ ಪ್ರಯತ್ನ ಮಾಡಿ ಎಂದರು, ಮಾಸ್ಕ್ ಹಾಕದವರಿಗೆ ದಂಡ ವಿಧಿಸುವುದು ಅರಿವಿನ ಒಂದು ಭಾಗವೇ ಹೊರತು ಸರ್ಕಾರಕ್ಕೆ ಇದರಿಂದ ಬೇರೆ ಉದ್ದೇಶ ಇಲ್ಲ ಎಂದರು.

LEAVE A REPLY

Please enter your comment!
Please enter your name here