ಎಪಿಎಂಸಿ, ಕೃಷಿ ಸುಧಾರಣಾ ನೀತಿ ಜಾರಿಗೆ ವಿರೋಧಿಸಿ ಎಸ್ .ಡಿ.ಪಿ.ಐ. ಪ್ರತಿಭಟನೆ

0

ಹುಬ್ಬಳ್ಳಿ: ಕೇಂದ್ರ ಸರಕಾರದ ಜಾರಿಗೆ ತಂದಿರುವ ನೂತನ ಎಪಿಎಂಸಿ, ಭೂ ಸುಧಾರಣಾ ತಿದ್ದುಪಡಿ ಕಾಯಿದೆ ವಿರೋಧಿಸಿ ನಗರದ ರಾಯಣ್ಣ ಸರ್ಕಲ್ ಬಳಿ ಸೋಶಿಯಲ್ ಡೆಮಾಕ್ರಟಿಕ್ ಪಕ್ಷದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಮಾಡಿದರು.
ರೈತಪರ ಸಂಘಟನೆ ಜತೆಗೆ ಪಕ್ಷಾತೀತವಾಗಿ ಬೆಂಬಲ ಸೂಚಿಸಿ ಕೇಂದ್ರ ಸರಕಾರ ಜಾರಿಗೆ ತಂದಿರುವ ನೂತನ ಕಾಯಿದೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಕಾರ್ಮಿಕ ವಿರೋಧಿ ನೀತಿಯನ್ನು ಜಾರಿಗೆ ತರುವ ಮೂಲಕ ಕೇಂದ್ರ ಸರಕಾರ ಪ್ರಜಾ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು ಕೂಡಲೇ ಈ ಅವೈಜ್ಞಾನಿಕ ಕಾಯಿದೆಗಳಾದ ಎಪಿಎಂಸಿ ಮತ್ತು ಭೂ ಸುಧಾರಣಾ ಕಾಯಿದೆಯನ್ನು ವಾಪಾಸ್ ಪಡೆಯಲು ಒತ್ತಾಯ ಮಾಡಿದರು.
ರೈತರು ಹಾಗೂ ಕಾರ್ಮಿಕ ವರ್ಗವನ್ನು ಹತ್ತಿಕ್ಕುವ ನಿಟ್ಟಿನಲ್ಲಿಕೇಂದ್ರ ಸರಕಾರ ಈ ರೀತಿ ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸೋಶಿಯಲ್ ಡೆಮಾಕ್ರಟಿಕ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಷ್ರಾದ ಅತ್ತಾರ, ಹಮೀದ್ ಬೆಂಗಾಲಿ, ಇಷ್ರಾದ್ ಅಹ್ಮದ್ ರಿತ್ತಿ ಹಾಗೂ ಮುಂತಾದವರಿದ್ದರು.

LEAVE A REPLY

Please enter your comment!
Please enter your name here