ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಮೂರನೇ ಹಂತದ ಪರೀಕ್ಷೆಯ ವೇಳಾಪಟ್ಟಿಯನ್ನು ಬುಧವಾರ ಎಸ್‌ಎಸ್‌ಸಿ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಮೊದಲ ಮತ್ತು ಎರಡನೇ ಹಂತದ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಮೂರನೇ ಹಂತದ ಪರೀಕ್ಷೆ ವೇಳಾಪಟ್ಟಿಯನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು.
ವೇಳಾಪಟ್ಟಿಯ ಪ್ರಕಾರ, ಆಯೋಗವು ಮೂರನೇ ಹಂತದ ಪರೀಕ್ಷೆಯನ್ನು ನವೆಂಬರ್ 22 ರಂದು ದೇಶಾದ್ಯಂತ ವಿವಿಧ ಕೇಂದ್ರಗಳಲ್ಲಿ ನಡೆಸಲಿದೆ. ಆಯೋಗವು ಎಸ್‌ಎಸ್‌ಸಿ ಸಿಜಿಎಲ್ ಶ್ರೇಣಿ 3 ರ ಪ್ರವೇಶ ಪತ್ರವನ್ನು ಪರೀಕ್ಷೆ ಪ್ರಾರಂಭವಾಗುವ 15 ದಿನಗಳೊಳಗೆ ಬಿಡುಗಡೆ ಮಾಡುತ್ತದೆ. ಹೆಚ್ಚಿನ ವಿವರಗಳಿಗೆ ಅಭ್ಯರ್ಥಿಗಳು https://ssc.nic.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.