ಗುಡಿಬಂಡೆ: ತಾಲ್ಲೂಕಿನ ಲಕ್ಕೇನಹಳ್ಳಿ ಗ್ರಾಮದ ವಿದ್ಯಾರ್ಥಿನಿ ಐಶ್ವರ್ಯ ರವರನ್ನು ಅಭಿನಂದಿಸಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ , ಪ್ರತಿನಿತ್ಯ ಸುಮಾರು ೩ ಕಿ.ಮೀ. ನಡೆದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಇಂದು ಇಡೀ ರಾಜ್ಯವೇ ತಿರುಗಿ ನೊಡುವಂತ ಸಾಧನೆ ಮಾಡಿದ್ದಾಳೆ.
ವಿದ್ಯಾರ್ಥಿನಿಗೆ ಮುಂದಿನ ವಿದ್ಯಾಭ್ಯಾಸಕ್ಕಾಗಿ ಬೇಕಾಗುವ ಅಗತ್ಯ ಸಹಕಾರ ನೀಡಲಾಗುತ್ತೆ. ಫಲಿತಾಂಶದಲ್ಲಿ ಇಡೀ ರಾಜ್ಯಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆ ಮೊದಲ ಸ್ಥಾನ, ಅದೇ ರೀತಿ ರಾಜ್ಯಕ್ಕೆ ಗುಡಿಬಂಡೆ ತಾಲ್ಲೂಕು ಮೊದಲ ಸ್ಥಾನ ಪಡೆದುಕೊಂಡಿರುವುದು ಸಂತಸದ ವಿಚಾರವಾಗಿದ್ದು, ಇದೇ ರೀತಿ ಮುಂದಿನ ದಿನಗಳಲ್ಲಿ ಈ ಸ್ಥಾನವನ್ನು ಮುಂದುವರೆಸಿಕೊಂಡು ಹೋಗಬೇಕು ಎಂದರು.
ಇದೇ ವೇಳೆ ಜಿಲ್ಲಾಧಿಕಾರಿ ಡಾ.ಲತಾ, ಜಿ.ಪಂ. ಸಿಇಒ ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಡಿಡಿಪಿಐ ನಾಗೇಶ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಐಶ್ವರ್ಯ ರವರನ್ನು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದರು.
ವರದಿ. ಸತೀಶ ಬಾಬು. ಎ
ಗುಡಿಬಂಡೆ ತಾಲೂಕು