ಕರ್ನಾಟಕ ರಾಜ್ಯ ವಿಧಾನ ಪರಿಷತ್ಗೆ ನಾಮ ನಿರ್ದೇಶನಗೊಂಡ ಶ್ರೀ ಶಾಂತಾರಾಮ ಸಿದ್ದಿ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನಕುಮಾರ್ ಕಟೀಲ ಹಾಗೂ ಸಂಸದರಾದ ಶ್ರೀ ಅನಂತಕುಮಾರ ಹೆಗಡೆ ಅವರ ನೇತೃತ್ವದಲ್ಲಿ ಇಂದು ಪಾಲ್ಗೊಳ್ಳಲಾಯಿತು.
ಯಲ್ಲಾಪುರದ ಎಪಿಎಂಸಿ ಕಲ್ಯಾಣ ಮಂಟಪದಲ್ಲಿ ಅವರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು. ಅಲ್ಲದೇ, ವಿಜಯ ಕರ್ನಾಟಕ ದಿನ ಪತ್ರಿಕೆಯು ಹೊರತಂದ ಶ್ರೀ ಶಾಂತಾರಾಮ ಸಿದ್ದಿ ಅವರ ಪರಿಚಯದ ಪುರವಣಿಯನ್ನು ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ನನ್ನೊಂದಿಗೆ ಕಾರ್ಮಿಕ ಸಚಿವರಾದ ಶ್ರೀ ಶಿವರಾಮ್ ಹೆಬ್ಬಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮಹೇಶ್ ಟೆಂಗಿನಕಾಯಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ವೆಂಕಟೇಶ ನಾಯಕ, ಮಾನ್ಯ ಶಾಸಕರಾದ ಶ್ರೀ ದಿನಕರ ಶೆಟ್ಟಿ, ಶ್ರೀ ಸುನೀಲ ನಾಯ್ಕ, ಹಳಿಯಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಸುನೀಲ ಹೆಗಡೆ ಮತ್ತು ಪಕ್ಷದ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.