ಕಾಂಗ್ರೆಸ್‌ ‌ ‘ಹಂಗಾಮಿ ಅಧ್ಯಕ್ಷ’ ಸ್ಥಾನಕ್ಕೆ ಸೋನಿಯಾ ಗಾಂಧಿ ರಾಜೀನಾಮೆ…!? ಕೂತುಹಲ ಮೂಡಿಸಿದ ನಾಳೆ ಸಭೆ

0

ಕಾಂಗ್ರೇಸ್‌ ಹಂಗಾಮಿ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದ್ದು, ನಾಳೆ ನಡೆಯಲಿರುವ ಎಐಸಿಸಿ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಹೊರ ಬೀಳಲಿದೆ ಎನ್ನಲಾಗುತ್ತಿದೆ.

ಕಾಂಗ್ರೆಸ್ ನಾಯಕತ್ವ ಬದಲಾಯಿಸುವಂತೆ ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಪಕ್ಷದ ನಾಯಕರು ಪತ್ರ ಬರೆದ ಹಿನ್ನೆಲೆಯಲ್ಲಿ ಕಾಂಗ್ರೆಸ್​ನ ಮಧ್ಯಂತರ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ ಅವರು ನಾಳೆ ಪಕ್ಷದ ಸ್ಥಾನದಿಂದ ಕೆಳಗಿಳಿಸಲು ಸನ್ನದ್ಧರಾಗಿದ್ದಾರೆ ಎನ್ನಲಾಗಿದೆ.. ಸೋನಿಯಾ ಗಾಂಧಿ ಅವರು ಮಧ್ಯಂತರ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ್ದಾರೆ ಮತ್ತು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಹಾಗೂ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.ಅದೇನೆ ಇರಲಿ ನಾಳಿನ ಸಭೆ ಬಹಳ ಕುತೂಹಲ ಮೂಡಿಸಿದೆ. ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟನ್ನು ಉಲ್ಲೇಖಿಸಿ ಹಿರಿಯ ನಾಯಕರು ನಾಯಕತ್ವದ ವಿಷಯದ ಬಗ್ಗೆ ಸೋನಿಯಾ ಗಾಂಧಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ನಾಳೆ ನಡೆಯಲಿರುವ ಸಭೆಯಲ್ಲಿ ಪಕ್ಷದ 20 ಕ್ಕೂ ಹೆಚ್ಚು ಉನ್ನತ ಮುಖಂಡರು ಸೋನಿಯಾ ಗಾಂಧಿಗೆ ಕಳುಹಿಸಿದ ಪತ್ರದಲ್ಲಿ ಎದ್ದಿರುವ ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ.ಪಕ್ಷದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ನಾಳೆ ಆನ್‌ಲೈನ್ ಸಭೆಗಾಗಿ ಸಭೆ ಸೇರಲಿದ್ದು, ಈ ವೇಳೆ ಗಾಂಧಿ ಕುಟುಂಬದ ಹೊರತಾದ ವ್ಯಕ್ತಿಯೊಬ್ಬರು ಅತಿಶೀಘ್ರದಲ್ಲಿ ಎಐಸಿಸಿಯ ಮುಖ್ಯಸ್ಥರಾಗುವುದು ಬಹುತೇಕ ನಿಶ್ಚಿತವಾಗಿದೆ.

LEAVE A REPLY

Please enter your comment!
Please enter your name here