ಕಾಂಗ್ರೇಸ್ ಸಂಸದ ಡಿ.ಕೆ. ಸುರೇಶ್ ಗೂ ಕೋವಿಡ್ ಸೋಂಕು ದೃಢ!

0

ಕಾಂಗ್ರೇಸ್ ಸಂಸದ ಡಿ.ಕೆ.ಸುರೇಶ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಈ ಕುರಿತು ಡಿ.ಕೆ. ಸುರೇಶ್ ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

ಸೋಮವಾರವಷ್ಟೇ ಸಿಬಿಐ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್ ಮನೆ ಮೇಲೆ ದಾಳಿ ನಡೆಸಿದ್ದರು. ಆದರೆ ಇಂದು ಸುರೇಶ್ ಅವರ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ ಎನ್ನಲಾಗಿದೆ.

ಡಿ.ಕೆ. ಸುರೇಶ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ತನಗೆ ಕೋವಿಡ್ ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಹಾಗೂ ನನ್ನ ಜೊತೆ ಸಂಪರ್ಕದಲ್ಲಿ ಇದ್ದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.

ಸೋಮವಾರ ಸಿಬಿಐ ದಾಳಿ ನಡೆದ ಸಂದರ್ಭ ಡಿ.ಕೆ. ಸುರೇಶ್ ಹಾಗೂ ಡಿ.ಕೆ. ಶಿವಕುಮಾರ್ ಅವರ ಬೆಂಬಲಿಗರು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು ಇಂದು ಕೋವಿಡ್ ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಬೆಂಬಲಿಗರಲ್ಲಿ ಆತಂಕ ಮನೆಮಾಡಿದೆ. ಈ ಹಿಂದೆ ಡಿ.ಕೆ. ಶಿವಕುಮಾರ್ ಅವರಲ್ಲೂ ಕೋವಿಡ್ ಪಾಸಿಟಿವ್ ವರದಿ ಬಂದಿದ್ದು ಅವರು ಗುಣಮುಖರಾಗಿದ್ದಾರೆ ಆದರೆ ಮಂಗಳವಾರ ಸಹೋದರ ಅವರಲ್ಲಿ ಸೋಂಕು ದೃಢಪಟ್ಟಿದೆ.

LEAVE A REPLY

Please enter your comment!
Please enter your name here