ಕಾರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಜಿಲ್ಲಾಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ ಅವರ ನೇತೃತ್ವದಲ್ಲಿ ಮಧ್ಯಾಹ್ನದ ಬಳಿಕವೂ ಮುಂದುವರಿಯಿತು.

0

ಕಾರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಜಿಲ್ಲಾಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ ಅವರ ನೇತೃತ್ವದಲ್ಲಿ ಮಧ್ಯಾಹ್ನದ ಬಳಿಕವೂ ಮುಂದುವರಿಯಿತು.

ಜಿಲ್ಲಾ ಪ್ರವಾಸೋದ್ಯಮ ವಿಷಯಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಕೇಂದ್ರವಿತ್ತು. ಆದರೆ, ಈಗ ಅದನ್ನು ನಿಷ್ಕ್ರಿಯಗೊಳಿಸಲಾಗಿದೆ. ಬಳಿಕ ಅದನ್ನು ಪ್ರವಾಸೋದ್ಯಮ ಸಮಿತಿಯನ್ನು ಆರಂಭಿಸಲಾಗಿದೆ. ಈವರಗೆ ಅದರ ಅಭಿವೃದ್ಧಿ ಕುರಿತು ಯಾವುದೇ ಸಭೆ ನಡೆದಿಲ್ಲ ಇದನ್ನು ನಡೆಸಬೇಕು ಎಂದು ಸಚಿವರಿಗೆ ಮನವಿ ಮಾಡಲಾಯಿತು.

ಜಿಲ್ಲಾ ಕ್ರೀಡಾಂಗಣದ ಅಭಿವೃದ್ಧಿ ಕುರಿತು ಸಭೆ ನಡೆಸಬೇಕು. ಖೇಲೋ ಇಂಡಿಯಾದ ಕೇಂದ್ರವನ್ನು ಕಾರವಾರದಲ್ಲಿಯೂ ಆರಂಬಿಸಬೇಕು. ಕ್ರೀಡಾಂಗಣ ಅಭಿವೃದ್ಧಿಗೂ ಮುಂದಾಗಬೇಕು. ಈಗಾಗಲೇ ಕಾರವಾರ ಮಾಲಾದೇವಿ ಕ್ರೀಡಾಂಗಣ ಅಭಿವೃದ್ದಿಗೆ ಈಗಾಗಲೇ ಯೋಜನೆಯನ್ನು ರೂಪಿಸಲಾಗಿದೆ. ಅದರಂತೆ ಕ್ರೀಡಾಂಗಣ ಅಭಿವೃದ್ಧಿಯಾದರೆ ಕ್ರೀಡಾಪಟುಗಳಿಗೆ ಅನುಕೂಲವಾಗುತ್ತದೆ ಎಂದು ಸಚಿವರ ಗಮನಕ್ಕೆ ತರಲಾಯಿತು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮಾತೃವಂದನ ಯೋಜನೆಯಲ್ಲಿ ಎರಡು ಸಾವಿರ ಹಣವನ್ನು ತಲುಪಿಸಲಾಗುತ್ತಿದೆ. ಕೋವಿಡ್-19ರ ಕಾರಣಕ್ಕೆ ಮಾತೃ ಪೂರ್ಣಯೋಜನೆಯಲ್ಲಿ ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಅಂಗನವಾಡಿಗಳಿಗೆ ಬರಲು ಸಾಧ್ಯವಾಗುತ್ತಿಲ್ಲ. ಅಲ್ಲದೇ, ಗುಡ್ಡಗಾಡು ಪ್ರದೇಶದಲ್ಲಿ ಮಳೆಗಾಲದಲ್ಲಿ ಓಡಾಡುವುದಕ್ಕೆ ಕಷ್ಟವಾಗುತ್ತದೆ. ಅದಕ್ಕಾಗಿ ಸಾಮಾಗ್ರಿಗಳನ್ನು ಮನೆಗೆ ತಲುಪಿಸುವ ಕೆಲಸ ಮಾಡಬೇಕು. ಆಹಾರ ಸಾಮಾಗ್ರಿಗಳ ಜತೆಗೆ ಮೊಟ್ಟೆಯನ್ನು ನೀಡಬೇಕು ಎಂದು ಅಧಿಕಾರಿಗೆ ಸೂಚಿಸಲಾಯಿತು.

ಎಂಜಿನಿಯರಿಂಗ್ ಕಾಲೇಜಿನ ಬಗ್ಗೆ ಹಿಂದೆ ಅನೇಕ ಗೊಂದಲಗಳಿದ್ದವು, ಅವುಗಳನ್ನು ಈಗ ನಿವಾರಿಸಲಾಗಿದೆ. ಅಲ್ಲದೇ, ಜಿಲ್ಲಾ ಕೈಗಾರಿಕೆ ಕೇಂದ್ರದ ಜಾಗಗಳನ್ನು ಒತ್ತುವರಿ ಮಾಡಲಾಗುತ್ತಿದೆ. ಅವುಗಳ ಸರ್ವೇ ನಡೆಸಿ, ಕಾಂಪೌಂಡ್ ಅಳವಡಿಸುವ ಕೆಲಸ ಮಾಡಬೇಕು ಎಂದು ಕೈಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸಚಿವರ ಮುಖಾಂತರ ಸೂಚಿಸಲಾಯಿತು.

ಕೊರೊನಾ ಕಾರಣಕ್ಕೆ ಕೆಎಸ್‌ಆರ್‌ಟಿಸಿಯಿಂದ ಗ್ರಾಮೀಣ ಪ್ರದೇಶಗಳಿಗೆ ಬಸ್‌ಗಳ ಸಂಚಾರ ಕಡಿಮೆಯಾಗಿವೆ. ಇದರಿಂದ ಈ ಮಾರ್ಗದಲ್ಲಿ ಜನರ ಓಡಾಟಕ್ಕೆ ತೊಂದರೆಯಾಗುತ್ತಿದೆ. ಅದಕ್ಕಾಗಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಸ್‌ಗಳ ಸಂಚಾರ ಮಾಡುವ ವೇಳಾ ಪಟ್ಟಿಯನ್ನು ಪತ್ರಿಕೆಗಳಲ್ಲಿ ನೀಡುವ ಮೂಲಕ ಮಾಹಿತಿ ತಲುಪಿಸಬೇಕು ಎಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ನನ್ನೊಂದಿಗೆ ಶಾಸಕರಾದ ದಿನಕರ ಶೆಟ್ಟಿ, ಸುನೀಲ್ ನಾಯ್ಕ, ಜಿಲ್ಲಾ ಪಂಚಾಯತ ಅಧ್ಯಕ್ಷರು, ಸದಸ್ಯರು, ಜಿಲ್ಲಾಧಿಕಾರಿ, ಜಿ.ಪಂ.ಸಿಇಒ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here