ಕಾರವಾರ ಜಿಲ್ಲಾ ಕೇಂದ್ರದಲ್ಲಿ ನೂತನವಾಗಿ ನಿರ್ಮಾಣವಾದ ಪೊಲೀಸ್ ವಸತಿ ಗೃಹವನ್ನು ಸಚಿವರಾದ ಶ್ರೀ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ಉದ್ಘಾಟಿಸಲಾಯಿತು.

0

ಕಾರವಾರ ಜಿಲ್ಲಾ ಕೇಂದ್ರದಲ್ಲಿ ನೂತನವಾಗಿ ನಿರ್ಮಾಣವಾದ ಪೊಲೀಸ್ ವಸತಿ ಗೃಹವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಗೃಹ ಸಚಿವರಾದ ಶ್ರೀ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ಉದ್ಘಾಟಿಸಲಾಯಿತು.

ಪೊಲೀಸರಿಗೆ ಸಕಲ ಸೌಲಭ್ಯವಿರುವ ಮನೆಗಳನ್ನು ನಿರ್ಮಿಸಿಕೊಡಲಾಗಿದೆ. ಅಲ್ಲದೇ, ಅಲ್ಲಿಗೆ ಬೇಕಾದ ಮೂಲ ಸೌಲಭ್ಯವನ್ನು ಒದಗಿಸುವಲ್ಲಿ ಬದ್ದರಾಗಿದ್ದೇವೆ. ಅದಕ್ಕಾಗಿ ವಸತಿ ಸಂಕೀರ್ಣದಲ್ಲೇ ಶಾಸಕರ ಅನುದಾನದಲ್ಲಿ 10ಲಕ್ಷ ರೂ. ಮೊತ್ತದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಮೀಸಲಿರಿಸಲಾಗಿದೆ.

ಈ ಹಿಂದೆ ಪೊಲೀಸ್ ವಸತಿ ಗೃಹಗಳಿಗೆ ಯಾವುದೇ ಸೌಲಭ್ಯಗಳು ಇರಲಿಲ್ಲ. ಪೊಲೀಸರು ಅವುಗಳಲ್ಲಿ ಕಷ್ಟದಿಂದಲೇ ವಾಸಿಸುತ್ತಿದ್ದರು. ಇದರಿಂದಾಗಿ ಪೊಲೀಸರು ನೆಮ್ಮದಿಯಿಂದ ಕಾರ್ಯನಿರ್ವಹಿಸಲು ಸಾದ್ಯವಾಗುತ್ತಿರಲಿಲ್ಲ. ಈಗ 96 ವಸತಿಗಳನ್ನು ನಿರ್ಮಿಸಲಾಗಿದೆ. ಇನ್ನೂ ಹೆಚ್ಚು ವಸತಿಗೃಹಗಳನ್ನು ನಿರ್ಮಿಸಿಕೊಡುವಂತೆ ಸರ್ಕಾರಕ್ಕೆ ಹಾಗೂ ಗೃಹ ಸಚಿವರಿಗೆ ಮನವಿ ಮಾಡುತ್ತೇನೆ.

ಈ ಸಂದರ್ಭದಲ್ಲಿ ನನ್ನೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಶಾಂತಾರಾಮ ಸಿದ್ದಿ, ಬಿಜೆಪಿ ಜಿಲ್ಲಾ ವಕ್ತಾರರಾದ ರಾಜೇಶ ನಾಯಕ, ಜಿಲ್ಲಾಧಿಕಾರಿ, ಜಿ.ಪಂ. ಸಿಇಒ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here