ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದಾಗ ಮಾಸ್ಕ್​ ಕಡ್ಡಾಯನಾ?- ಕೇಂದ್ರ ಆರೋಗ್ಯ ಇಲಾಖೆ ಹೇಳಿದ್ದು ಹೀಗೆ.

0

ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದಾಗ ಮಾಸ್ಕ್​ ಧರಿಸಬೇಕು, ಇಲ್ಲದಿದ್ದರೆ ದಂಡವಿಧಿಸಲಾಗುವುದು ಎಂಬ ನಿಯಮ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ಸ್ಪಷ್ಟಪಡಿಸಿದೆ.

ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಈ ಸ್ಪಷ್ಟನೆ ನೀಡಿದ್ದಾರೆ. ನೀವು ಕಾರಿನಲ್ಲಿ ಒಬ್ಬರೇ ಇದ್ದು, ಗಾಡಿ ಓಡಿಸುತ್ತಿದ್ದೀರಿ ಎಂದಾದರೆ ಮಾಸ್ಕ್​ ಕಡ್ಡಾಯವಲ್ಲ. ಅದನ್ನು ಕೊವಿಡ್​-19 ನಿಯಮ ಉಲ್ಲಂಘನೆ ಎಂದು ಪರಿಗಣಿಸಿ ದಂಡವಿಧಿಸುವುದಿಲ್ಲ. ನಾವು ಅಂಥ ಯಾವುದೇ ಸೂಚನೆಯನ್ನೂ ಮಾರ್ಗಸೂಚಿಯಲ್ಲಿ ಉಲ್ಲೇಖಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗೇ ಗುಂಪಿನಲ್ಲಿ ಇದ್ದಾಗ ಮಾಸ್ಕ್​ ಕಡ್ಡಾಯ ಎಂದು ಹೇಳಿದ್ದಾರೆ.

ಹಲವು ಪ್ರಮುಖ ನಗರಗಳಲ್ಲಿ, ಅದರಲ್ಲೂ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಟ್ರಾಫಿಕ್​ ಪೊಲೀಸರು ಕಾರಿನಲ್ಲಿ ಒಬ್ಬರೇ ಹೋಗುತ್ತಿದ್ದಾಗಲೂ ಅವರನ್ನು ನಿಲ್ಲಿಸಿ ಮಾಸ್ಕ್​ ಧರಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಅಷ್ಟೇ ಅಲ್ಲ ಚಲನ್​ ವಿಧಿಸುತ್ತಿದ್ದಾರೆ ಎಂಬ ವರದಿಗಳು ಇತ್ತೀಚೆಗೆ ಹೆಚ್ಚಾಗಿದ್ದವು. ಮಾಧ್ಯಮಗಳಲ್ಲಿ ಫೋಟೋಗಳೂ ಪ್ರಕಟವಾಗಿದ್ದವು. ಹೀಗಿರುವಾಗ ಆರೋಗ್ಯ ಇಲಾಖೆಯಿಂದ ಬಂದ ಸ್ಪಷ್ಟನೆ ಮಹತ್ವ ಎನಿಸಿದೆ. (ಏಜೆನ್ಸೀಸ್​)

LEAVE A REPLY

Please enter your comment!
Please enter your name here