ಕುರಿ, ಮೇಕೆ ಘಟಕ ಸ್ಥಾಪನೆಗೆ ಸಹಾಯ ಧನಕ್ಕೆ ಅರ್ಜಿ ಆಹ್ವಾನ

0

 ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃಧ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಕುರಿ ಮತ್ತು ಮೇಕೆ ಘಟಕ ಸ್ಥಾಪನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಗೆ ವಿಶೇಷ ಘಟಕ ಯೋಜನೆಯಡಿ 11 ಹಾಗೂ ಗಿರಿಜನ ಉಪಯೋಜನೆಯಡಿ 5 ಜನ ಸೇರಿ ಒಟ್ಟು 16 ಜನ ಫಲಾನುಭವಿಗಳಿಗೆ ಅವಕಾಶವಿದ್ದು, ಅರ್ಜಿ ಸಲ್ಲಿಸುವವರು ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಸದಸ್ಯರಾಗಿರಬೇಕು. 18 ರಿಂದ 60 ವಯಸ್ಸಿನವರಾಗಿರಬೇಕು.

ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತಿದ್ದು, ಆಸಕ್ತರು ಆಯಾ ತಾಲೂಕಿನ ಸಹಾಯಕ ನಿರ್ದೇಶಕರು ಪಶು ಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಅರ್ಜಿಗಳನ್ನು ಪಡೆದು ಪ್ರಕಟಣೆ ದಿನಾಂಕದಿಂದ 15 ದಿನಗಳೊಳಗಾಗಿ ಅರ್ಜಿ ಸಲ್ಲಿಸುವಂತೆ ರಾಜ್ಯ ಬಾಗಲಕೋಟೆಯ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here