ಕೃಷಿ ಮಸೂದೆಗಳು: ಕಾಂಗ್ರೆಸ್ ನಿಂದ ದೇಶಾದ್ಯಂತ ಪ್ರತಿಭಟನೆ, ಬೃಹತ್ ಸಹಿ ಸಂಗ್ರಹ ಅಭಿಯಾನ

0

ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿರುವ ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಪಕ್ಷ ಸೋಮವಾರ ಹೇಳಿದೆ. ಬಡ ಜನರು ಈ ಪ್ರಸ್ತಾವಿತ ಕಾಯ್ದೆಯ ವಿರುದ್ಧವಾಗಿದ್ದು, 2 ಕೋಟಿ ರೈತರ ಸಹಿ ಸಂಗ್ರಹ ಅಭಿಯಾನ ಕೈಗೊಳ್ಳುವುದಾಗಿ ತಿಳಿಸಿದೆ.

ಪಕ್ಷದ ಹಿರಿಯ ಮುಖಂಡರ ಜೊತೆಗಿನ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್, ಬಡ ಜನರು ಕೃಷಿ ಮಸೂದೆಗಳ ವಿರುದ್ಧವಾಗಿದ್ದು, ರೈತರಿಂದ 2 ಕೋಟಿ ಸಹಿ ಸಂಗ್ರಹ ಗುರಿಯ ಹಿನ್ನೆಲೆಯಲ್ಲಿ ಬೃಹತ್ ಸಹಿ ಸಂಗ್ರಹ ಅಭಿಯಾನ ನಡೆಸಲಾಗುವುದು ಎಂದರು.

ತದನಂತರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಕೆ. ಸಿ. ವೇಣುಗೋಪಾಲ್ ತಿಳಿಸಿದರು.

ರೈತ ಮಸೂದೆಗಳ ವಿರುದ್ಧ ದೇಶಾದ್ಯಂತ ಸರಣಿ ಸುದ್ದಿಗೋಷ್ಠಿ ನಡೆಸಲಾಗುವುದು ಎಂದು ಮತ್ತೋರ್ವ ಕಾಂಗ್ರೆಸ್ ಮುಖಂಡ ರಂದೀಪ್ ಸುರ್ಜೆವಾಲಾ ಹೇಳಿದರು. ಪಕ್ಷದ ರಾಜ್ಯಾಧ್ಯಕ್ಷರು, ಮತ್ತಿತರ ಹಿರಿಯ ಮುಖಂಡರು ಅವರವರ ರಾಜ್ಯದಲ್ಲಿ ಮೆರವಣಿಗೆಯಲ್ಲಿ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here