ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ನಿವಾಸಕ್ಕೆ ಬೆಂಕಿ ಹಚ್ಚಿದ್ದ ಇಬ್ಬರು ಆರೋಪಿಗಳನ್ನು ಇಂದು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನಯೀಮ್ ಹಾಗೂ ಫಿರ್ದೋಸ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಆಗಸ್ಟ್ 11 ರಂದು ಅಖಂಡ ಶ್ರೀನಿವಾಸಮೂರ್ತಿ ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತಾರು ಎಫ್ ಐ ಆರ್ ದಾಖಲಿಸಿಕೊಂಡಿದ್ದ ಪೊಲೀಸರು ನಂತರ ಆರೋಪಿಗಳನ್ನು ಬಂಧಿಸಲು ಮುಂದಾಗಿದ್ದರು. ಬೆಂಗಳೂರು ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಹೆಡೆಮುರಿ ಕಟ್ಟಲು ಪೊಲೀಸರು ತಂಡೋಪತಂಡವಾಗಿ ಕೆಲಸ ಮಾಡುತ್ತಿದ್ದಾರೆ.