ಕೈಗಾರಿಕೋದ್ಯಮಿಗಳ ಅನುಕೂಲಕ್ಕಾಗಿ ಸದ್ಯದಲ್ಲೇ ಏಕಗವಾಕ್ಷಿ ವೆಬ್‌ಸೈಟ್‌: ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಫಾರಿನ್‌ ಇನ್‌ವೆಸ್ಟರ್ಸ್‌ ಕೌನ್ಸಿಲ್‌ ಕರ್ನಾಟಕ ಚಾಪ್ಟರ್‌ ನ ಉದ್ಘಾಟನೆ

0

ಕೈಗಾರಿಕೋದ್ಯಮಿಗಳ ಅನುಕೂಲಕ್ಕಾಗಿ ಸದ್ಯದಲ್ಲೇ ಏಕಗವಾಕ್ಷಿ ವೆಬ್‌ಸೈಟ್‌: ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌
ಫಾರಿನ್‌ ಇನ್‌ವೆಸ್ಟರ್ಸ್‌ ಕೌನ್ಸಿಲ್‌ ಕರ್ನಾಟಕ ಚಾಪ್ಟರ್‌ ನ ಉದ್ಘಾಟನೆ

ಬೆಂಗಳೂರು ಸೆಪ್ಟೆಂಬರ್‌ 12: ಕೈಗಾರಿಕೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುವಂತಹ ಏಕಗವಾಕ್ಷಿ ವೆಬ್‌ಸೈಟನ್ನು ಸದ್ಯದಲ್ಲೇ ಪ್ರಾರಂಭಿಸಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ನಗರದ ಖಾಸಗಿ ಹೋಟೇಲ್‌ ನಲ್ಲಿ ಎಫ್‌ಸಿಐ ವತಿಯಿಂದ ಆಯೋಜಿಸಲಾಗಿದ್ದ ಫಾರಿನ್‌ ಇನ್‌ವೆಸ್ಟರ್ಸ್‌ ಕೌನ್ಸಿಲ್‌ ಕರ್ನಾಟಕ ಚಾಪ್ಟರ್‌ ನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯ ಸರಕಾರ ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಹಾಗೂ ಕೈಗಾರಿಕೆಗಳ ಸ್ಥಾಪನೆ ಆಗಬೇಕು ಎನ್ನುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಿದೆ. ಅಲ್ಲದೆ ಉದ್ಯಮ ಸ್ನೇಹಿ ಉಪಕ್ರಮಗಳನ್ನು ಅನುಷ್ಠಾನಗೊಳಿಸುವತ್ತ ಹೆಚ್ಚಿನ ಗಮನ ಹರಿಸುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ಹೊಸ ಕೈಗಾರಿಕಾ ನೀತಿ ಯನ್ನು ಜಾರಿಗೊಳಿಸಿದ್ದು ಹಾಗೂ ಕೈಗಾರಿಕಾ ಸೌಲಭ್ಯ ಅಧಿನಿಯಮದಲ್ಲಿ ಅಮೂಲಾಗ್ರ ಬದಲಾವಣೆಯನ್ನು ಮಾಡಿರುವ ದೇಶದ ಮೊದಲ ರಾಜ್ಯ ಎನ್ನುವ ಹೆಗ್ಗಳಿಕೆ ನಮ್ಮದಾಗಿದೆ ಎಂದರು.

ಏಕಗವಾಕ್ಷಿ ಯೋಜನೆಯ ಮೂಲಕ ಕೈಗಾರಿಕೆಗಳ ಸ್ಥಾಪನೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಅನೇಕ ನೀತಿಗಳನ್ನು ರೂಪಿಸಲಾಗುತ್ತಿದೆ. ಅಲ್ಲದೆ, ಈಸ್‌ ಆಫ್‌ ಡೂಯಿಂಗ್‌ ಬ್ಯೂಸಿನೆಸ್‌ ನ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಬಂಡವಾಳ ಹೂಡಿಕೆಗೆ ಸಮಸ್ಯೆಗಳಿಗೂ ಪರಿಹಾರ ನೀಡುವಂತಹ ವೆಬ್‌ಸೈಟ ನ್ನು ರಚಿಸಲಾಗುತ್ತಿದೆ. ಈ ವೆಬ್‌ ಸೈಟ್‌ ನಲ್ಲಿ ಎಲ್ಲಾ ಪ್ರಶ್ನೆಗಳಿಗೆ ಉತ್ತರ ದೊರೆಯಲಿದೆ. ಹಾಗೆಯೇ ಸಮಸ್ಯೆಗಳ ಪರಿಹಾರಕ್ಕೆ ವಿಳಂಬ ತೋರುವ ಅಧಿಕಾರಿಗಳಿಗೆ ರಿಮೈಂಡರ್‌ ನೀಡುವ ವ್ಯವಸ್ಥೆಯೂ ಇರಲಿದೆ ಎಂದು ಹೇಳಿದರು.

ಒಟ್ಟಾರೆಯಾಗಿ ರಾಜ್ಯವನ್ನು ಕೈಗಾರಿಕಾ ಸ್ನೇಹೀ ರಾಜ್ಯವನ್ನಾಗಿಸುವುದು ಹಾಗೂ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸುವುದು ನಮ್ಮ ಮೂಲ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಕೈಗಾರಿಕಾ ಇಲಾಖೆಯ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದಲ್ಲಿ ಹೂಡಿಕೆಗೆ ಪ್ರಶಸ್ತವಾದ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲೂ ಕೈಗಾರಿಕಾ ಸಂಘ ಸಂಸ್ಥೆಗಳು ಹಾಗೂ ಬಂಡವಾಳ ಹೂಡಿಕೆಗೆ ಒಲವು ತೋರಿಸುವ ಕೈಗಾರಿಕೋದ್ಯಮಿಗಳ ಸಲಹೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಫಾರಿನ್‌ ಇನ್‌ವೆಸ್ಟರ್‌ ಫೋರಂನ ಕೃಷ್ಣ ಕುಮಾರ್‌, ಇಂಡಿಪೆಂಡೆಂಟ್‌ ಅಡ್ವೈಸರಿ ಸರ್ವೀಸಸ್‌ ಫಾರಿನ್‌ ಇನ್‌ವೆಸ್ಟರ್ಸ್‌ ಕೌನ್ಸಿಲ್‌, ಡೆಪ್ಯೂಟಿ ಕೌನ್ಸಲ್‌ ಜೆನೆರಲ್‌ ಆಫ್‌ ಜಪಾನ್‌ ಇನ್‌ ಕರ್ನಾಟಕ ಹಿ ಮೌರೊ ಕತ್ಸುಮಾಸಾ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಂಡಿದ್ದರು.

 

LEAVE A REPLY

Please enter your comment!
Please enter your name here