ಕೊರೊನಾ ಆತಂಕ : ಎಂ.ಎಸ್ ಧೋನಿಗೆ ಕೋವಿಡ್ ಟೆಸ್ಟ್

0

ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್ ಧೋನಿ ಅವರು ಕೊರೊನಾ ಟೆಸ್ಟ್ ಗೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ.

ಸೆಪ್ಟೆಂಬರ್ 19ರಿಂದ 13ನೇ ಆವೃತ್ತಿಯ ಐಪಿಎಲ್ ನಡೆಸಲು ಬಿಸಿಸಿಐ ಮುಂದಾಗಿದ್ದು, ಭಾರತದಲ್ಲಿ ಸೋಂಕು ಹಿಡಿತಕ್ಕೆ ಬಾರದ ಕಾರಣ ಟೂರ್ನಿಯನ್ನು ಯುಎಇಗೆ ಸ್ಥಳಾಂತರಿಸಲಾಗಿದೆ. ಈ ನಡುವೆ ಫ್ರಾಂಚೈಸಿಗಳು ತಮ್ಮ ತಂಡದ ಆಟಗಾರರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸುತ್ತಿವೆ.

ಅದರಂತೆ ಸದ್ಯ ರಾಂಚಿಯಲ್ಲಿರುವ ಧೋನಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ ಕೆ) ತಂಡದ ಆಟಗಾರ ಮೋನು ಕುಮಾರ್ ಅವರು ಬುಧವಾರ ತಮ್ಮ ಗಂಟಲು ದ್ರವದ ಮಾದರಿಯನ್ನು ನೀಡಿದ್ದಾರೆ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here