ಕೊರೋನಾ ಸೋಂಕಿತ ಸಂಸದರ ಸಂಖ್ಯೆ ಹೆಚ್ಚಳ ಹಿನ್ನಲೆ : ಈ ಬಾರಿಯ ಸಂಸತ್ ಅಧಿವೇಶನಕ್ಕೆ ಕತ್ತರಿ.?

0

ಈ ವಾರ ಆರಂಭವಾದ ಸಂಸತ್ ಅಧಿವೇಶನ ಸಂದರ್ಭದಲ್ಲಿ ಕೊರೋನಾ ಪರೀಕ್ಷೆಗೆ ಒಳಗಾದಂತ 22 ಸಂಸದರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಇದೀಗ ಸಂಸತ್ ಅಧಿವೇಶನದಲ್ಲಿ ಭಾಗವಹಿಸಿದಂತ 30 ಸಂಸದರಿಗೆ ಕೊರೋನಾ ವೈರಸ್ ಸೋಂಕಿಗೆ ಗುರಿಯಾಗುವ ಸಾಧ್ಯತೆ ಇದೆ ಎಂಬುದಾಗಿ ಸಂಸತ್ತಿನ ಇಬ್ಬರು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಈ ಬಾರಿಯ ಸಂಸತ್ ಅಧಿವೇಶನ ಕಲಾಪಕ್ಕೂ ಕತ್ತರಿ ಬೀಳಲಿದೆ ಎನ್ನಲಾಗಿದೆ.

ಸೆಪ್ಟೆಂಬರ್ 14ರಂದು ಭಾರತದ ಸಂಸತ್ತಿನ ಆರು ತಿಂಗಳ ಅವಧಿಯಲ್ಲಿ ಮೊದಲ ಬಾರಿಗೆ ಸಭೆ ಸೇರಿ ಅಕ್ಟೋಬರ್ 1ರವರೆಗೆ ಕಾರ್ಯನಿರ್ವಹಿಸಲಿದೆ ಎಂದು ಇಬ್ಬರು ಅಧಿಕಾರಿಗಳು ಹೇಳಿದ್ದಾರೆ. ಅಧಿವೇಶನ ಆರಂಭವಾದಾಗಿನಿಂದ ಕೊರೋನಾ ಸೋಂಕಿನ ಸಕಾರಾತ್ಮಕ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಅಧಿವೇಶನ ಮೊಟಕುಗೊಳಿಸುವ ಬಗ್ಗೆ ಸರಕಾರ ಚಿಂತನೆ ನಡೆಸುತ್ತಿದೆ ಎಂಬುದಾಗಿ ಸಂಸತ್ತಿನ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

ಅಂದಹಾಗೇ ಕೊರೋನಾ ಮುಂಜಾಗ್ರತಾ ಕ್ರಮವಾಗಿ ಸಂಸತ್ ಪ್ರವೇಶಿಸುವ ಪತ್ರಕರ್ತರು, ಪ್ರತಿದಿನ ಕೊರೋನಾ ಪರೀಕ್ಷೆಗೆ ಒಳಪಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಲಾಗಿದೆ.

LEAVE A REPLY

Please enter your comment!
Please enter your name here