ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅಭಿಮಾನಿಗಳಿಗೆ ಪುತ್ರ ಚರಣ್ ಶುಭ ಸುದ್ದಿ

0

ಕೊರೊನಾ ಸೋಂಕು ತಗುಲಿ ಆಗಸ್ಟ್ 5 ರಿಂದ ಚೆನ್ನೈನ ಎಂಜಿಎಂ ಹೆಲ್ತ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಅವರ ಆರೋಗ್ಯ ಸ್ಥಿರವಾಗಿದೆ.

ನಾಲ್ಕು ದಿನಗಳಿಂದ ಆರೋಗ್ಯ ಸ್ಥಿರವಾಗಿದೆ ಎಂದು ಎಸ್.ಪಿ. ಬಾಲಸುಬ್ರಹ್ಮಣ್ಯಂ ಪುತ್ರ ಎಸ್.ಪಿ. ಚರಣ್ ತಿಳಿಸಿದ್ದಾರೆ. ವಿಡಿಯೋ ಸಂದೇಶದಲ್ಲಿ ಮಾಹಿತಿ ನೀಡಿದ ಅವರು, ತಂದೆಯವರ ಆರೋಗ್ಯ ಸ್ಥಿರವಾಗಿದೆ. ಈ ವಾರಂತ್ಯದ ವೇಳೆಗೆ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯದ ಬಗ್ಗೆ ಶುಭಸುದ್ದಿ ಸಿಗಲಿದೆ ಎಂದು ಹೇಳಿದ್ದಾರೆ.

ಈ ವಾರಂತ್ಯಕ್ಕೆ ಅಥವಾ ಮುಂದಿನವಾರ ಆರಂಭದ ವೇಳೆಗೆ ಒಳ್ಳೆಯ ಸುದ್ದಿಯನ್ನು ಹಂಚಿಕೊಳ್ಳಲು ಎದುರು ನೋಡುತ್ತಿದ್ದೇನೆ. ತಂದೆಯವರ ಆರೋಗ್ಯ ಚೇತರಿಕೆಗಾಗಿ ವಿಶ್ವದಾದ್ಯಂತ ಹಾರೈಸಿದ, ಪ್ರಾರ್ಥಿಸಿದ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿರುವ ಚರಣ್, ಸೋಮವಾರದ ವೇಳೆಗೆ ಒಳ್ಳೆಯ ಸುದ್ದಿ ಆಶಿಸುತ್ತಿದ್ದೇನೆ. ಇದಕ್ಕಾಗಿ ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ.

ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಮುಂದುವರೆಸಲಾಗಿದ್ದು, ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡುಬಂದಿದೆ ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here