ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಚೇತರಿಕೆ ಬಗ್ಗೆ ಪುತ್ರ ಚರಣ್ ಗುಡ್ ನ್ಯೂಸ್

0

ಕೊರೋನಾ ಸೋಂಕು ತಗಲಿ ಚೆನ್ನೈ ಎಂಜಿಎಂ ಹೆಲ್ತ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಪುತ್ರ ಚರಣ್ ಈ ಕುರಿತಾಗಿ ಮಾಹಿತಿ ನೀಡಿ, ಎಸ್.ಪಿ. ಬಾಲಸುಬ್ರಮಣ್ಯಂ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಶ್ವಾಸಕೋಶದಲ್ಲಿ ಸ್ವಲ್ಪ ಚೇತರಿಕೆಯಾಗಿದೆ. ಮೊನ್ನೆಗಿಂತ ಇನ್ನೂ ಚೆನ್ನಾಗಿ ಚಿಕಿತ್ಸೆಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಮೊದಲ ಹಂತದಲ್ಲಿ ತಂದೆಯವರು ಗುಣಮುಖರಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here