ಗಡಿನಾಡಿನ ವಿದ್ಯಾರ್ಥಿಗಳ ಸಾಧನೆ ರಾಜ್ಯಕ್ಕೆ ಮಾದರಿ: ವೈ.ಎ.ಎನ್

0

ಗುಡಿಬಂಡೆ: ಗಡಿನಾಡಿನ ವಿದ್ಯಾರ್ಥಿಗಳು ಇಂದು ಮಾಡಿರುವ ಸಾಧನೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಎಂದು ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.
ಪಟ್ಟಣದ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಲು ಶ್ರಮವಹಿಸಿದ ಗುಡಿಬಂಡೆ ತಾಲ್ಲೂಕಿನ ಶಿಕ್ಷಕ ವರ್ಗ ಹಾಗೂ ಆಡಳಿತ ವರ್ಗಕ್ಕೆ ಅಭಿನಂದನೆ ತಿಳಿಸಿ ಮಾತನಾಡಿದ ಅವರು, ಇಂದು ಇಡೀ ರಾಜ್ಯಕ್ಕೆ ಗಡಿ ಪ್ರದೇಶದ ವಿದ್ಯಾರ್ಥಿಗಳೂ ಸಹ ಉನ್ನತ ಸಾಧನೆ ಮಾಡಬಲ್ಲರು ಎಂಬುದನ್ನು 10ನೇ ತರಗತಿ ಫಲಿತಾಂಶದಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಗುಡಿಬಂಡೆ ತಾಲ್ಲೂಕಿನ ವಿದ್ಯಾರ್ಥಿಗಳು ಸಾಬೀತು ಮಾಡಿದ್ದಾರೆ. ರಾಜ್ಯದಲ್ಲಿನ ಅತೀ ಚಿಕ್ಕ ತಾಲ್ಲೂಕಾದ ಈ ಭಾಗದಲ್ಲಿ ವಿದ್ಯಾರ್ಥಿಗಳು ಈ ಸಾಧನೆಗೆ ಪೂರಕವಾಗಿ ಕೆಲಸ ಮಾಡಿದ ಎಲ್ಲ ವರ್ಗದ ಅಧಿಕಾರಿಗಳೂ ಇಂದು ಅಭಿನಂದನಗೆ ಅರ್ಹರಾಗಿದ್ದಾರೆ. ಇತ್ತೀಚಿಗೆ ಸರ್ಕಾರಿ ಶಾಲೆಗಳಲ್ಲಿ ತಮ್ಮ ಮಕ್ಕಳನ್ನು ವಿದ್ಯಾಭ್ಯಾಸಕ್ಕೆ ಕಳುಹಿಸುವುದು ತುಂಬಾ ವಿರಳವಾಗಿದೆ. ಇಂದು ಅನೇಕರು ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳೆ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ನನ್ನ ಆಪ್ತ ಸಹಾಯಕರ ಮಗಳು ಯುಪಿಎಸ್‍ಸಿ ಪರೀಕ್ಷೆ ರ್ಯಾಂಕ್ ಪಡೆದಿದ್ದಾಳೆ. ಆ ಮಗು ಕೂಡ ಸರ್ಕಾರಿ ಶಾಲೆಯ ವಿದ್ಯಾರ್ಥಿಯಾಗಿದ್ದಾಳೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಸರ್ಕಾರಿ ಶಾಲೆಗಳ ಬಗೆಗಿನ ತಾತ್ಸಾರ ಮನೋಭಾವ ಬಿಡಬೇಕೆಂದು ಸಲಹೆ ನೀಡಿದರು.
ನಂತರ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ಇಂದು ಇಡಿ ರಾಜ್ಯಕ್ಕೆ ಗುಡಿಬಂಡೆಯ ವಿದ್ಯಾರ್ಥಿಗಳ ಪರಿಶ್ರಮ ತಿಳಿದಿದೆ. ಇಂದು ವಿದ್ಯಾರ್ಥಿಗಳು ಕಠಿಣ ಪರಿಶ್ರಮಪಟ್ಟು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿಕೊಡುವುದರ ಜೊತೆಗೆ ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿ ಇಡೀ ಗುಡಿಬಂಡೆಗೆ ಕೊಡುಗೆ ನೀಡಿದ್ದಾರೆ. ಈ ಸಾಧನೆಗೆ ಮುಖ್ಯವಾಗಿ ಶಿಕ್ಷಣ ಇಲಾಖೆ, ತಾಲ್ಲೂಕು ಪಂಚಾಯತಿ, ತಾಲ್ಲೂಕು ಆಡಳಿತ ಸೇರಿದಂತೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಿ ವಿದ್ಯಾರ್ಥಿಗಳಿಗೆ ಪೆÇ್ರೀತ್ಸಾಹ ನೀಡಿದ್ದಾರೆ. ಪ್ರತೀ ವರ್ಷದಂತೆ ಈ ಬಾರಿ ಕೂಡ ನಮ್ಮ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಸಹ ಆಯೋಜನೆ ಮಾಡಲಾಗುವುದು ಎಂದರು.

ವರದಿ:-ಸತೀಶ ಬಾಬು.ಎ
ಗುಡಿಬಂಡೆ ತಾಲೂಕು

LEAVE A REPLY

Please enter your comment!
Please enter your name here