ಗಾಂಧಿ ಜಯಂತಿ ಪ್ರಯುಕ್ತ ಬಿಜೆಪಿಯ ವಿಶೇಷ ಕಾರ್ಯಕ್ರಮ

0

ರಾಜ್ಯ ಬಿಜೆಪಿಯ ಸೂಚನೆಯಂತೆ ಅ.2ರಂದು ಜಿಲ್ಲೆ ಯಾದ್ಯಂತ ಪಕ್ಷದ ವತಿಯಿಂದ ನಡೆಯಲಿರುವ ಗಾಂಧಿ ಜಯಂತಿ ಆಚರಣೆಯ ಸಂದರ್ಭದಲ್ಲಿ ಪ್ರತೀ ಮಂಡಲಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಈ ಬಗ್ಗೆ ಸಮಾ ಲೋಚನಾ ಸಭೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಿ.ರವಿ ಅಮೀನ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಹಾಗೂ ಗಾಂಧಿ ಜಯಂತಿ ಕಾರ್ಯಕ್ರಮದ ಜಿಲ್ಲಾ ಪ್ರಮುಖ್ ಗೀತಾಂಜಲಿ ಸುವರ್ಣ ಈ ಬಗ್ಗೆ ವಿವರಗಳನ್ನು ನೀಡಿದರು. ಇದಕ್ಕಾಗಿ ಪ್ರತಿ ಮಂಡಲ ಮಟ್ಟದಲ್ಲಿ ಇಬ್ಬರು ಪ್ರಮುಖರನ್ನು ನಿಯೋಜಿಸ ಲಾಗಿದೆ ಎಂದರು.

ರಾಜ್ಯ ಮತ್ತು ಜಿಲ್ಲಾ ಬಿಜೆಪಿಯ ಸೂಚನೆಯಂತೆ ಪ್ರತೀ ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ ಮತ್ತು ಬೂತ್ ಮಟ್ಟದ ವಿವಿಧ ಪ್ರಮುಖ ಸ್ಥಳಗಳಲ್ಲಿ ಸ್ವಚ್ಚತಾ ಅಭಿಯಾನ, ಆತ್ಮ ನಿರ್ಭರ ಭಾರತ ಬಗ್ಗೆ ಮಾಹಿತಿ ಕಾರ್ಯಕ್ರಮ, ಕೈಮಗ್ಗ ಉತ್ಪನ್ನಗಳ ಸಹಿತ ಸ್ವದೇಶಿ ವಸ್ತುಗಳ ಬಳಕೆ ಬಗ್ಗೆ ಜಾಗೃತಿ ಮೂಡಿಸುವುದು, ಗಾಂಧಿ ಪ್ರತಿಮೆ ಇರುವ ಸ್ಥಳಗಳನ್ನು ಸ್ವಚ್ಚಗೊಳಿಸಿ ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆಗೈಯುವುದು ಇವೇ ಮುಂತಾದ ಕಾರ್ಯಕ್ರಮಗಳನ್ನು ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು, ಮತ್ತು ಕಾರ್ಯಕರ್ತರು ಸೇರಿ ವ್ಯವಸ್ಥಿತವಾಗಿ ಆಯೋಜಿಸಬೇಕು ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here