ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌ಗೆ ಕೊರೊನಾ ಸೋಂಕು

0

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌(47)ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ವಿಚಾರವನ್ನು ಸ್ವತಃ ಪ್ರಮೋದ್ ಸಾವಂತ್ ಅವರೇ ತನ್ನ ಟ್ವಿಟ್ಟರ್ನಲ್ಲಿ ಖಚಿತ ಪಡಿಸಿದ್ದಾರೆ.

ಗೋವಾ ರಾಜ್ಯದಲ್ಲಿ ಇದುವರೆಗೆ 17,418 ಕೋವಿಡ್ ಪ್ರಕರಣಗಳು ದೃಢವಾಗಿದೆ. ಇದುವರೆಗೆ 192 ಮಂದಿ ಸೋಂಕಿತರು ಸಾವನ್ನಪ್ಪಿದ್ದು, 13,577 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಪ್ರಮೋದ್ ಸಾವಂತ್ ಅವರು ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊವಿಡ್ 19 ಆರೈಕೆ ಕೇಂದ್ರಗಳ ಹೊಣೆ ಹೊತ್ತಿರುವ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾರ್ಯಾಚರಣೆ ಪರಿಶೀಲನೆ ನಡೆಸಿದ್ದರು.

ನನಗೆ ಕೋವಿಡ್-19 ಪಾಸಿಟಿವ್ ಇರುವುದು ಪತ್ತೆಯಾಗಿದೆ. ಆದರೆ ಯಾವುದೇ ರೋಗಲಕ್ಷಣಗಳು ಇಲ್ಲದೇ ಇರುವ ಕಾರಣ ಮನೆಯಲ್ಲಿಯೇ ಇಸೊಲೇಶನ್ ನಲ್ಲಿ ಇರುತ್ತೇನೆ. ಮನೆಯಲ್ಲಿ ಇದ್ದುಕೊಂಡು ಕೆಲಸ ನಿರ್ವಹಿಸುತ್ತೇನೆ. ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಅಗತ್ಯ ಕ್ರಮ ಕೈಗೊಳ್ಳಿ ಎಂದು ಪ್ರಮೋದ್ ಸಾವಂತ್ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here