ಗ್ರಾಮಸ್ಥರಿಂದ ಅವಮಾನ – ವ್ಯಕ್ತಿ ನೇಣಿಗೆ ಶರಣು! ಇವರಿಂದ ಪ್ರಕಟಿಸಲಾಗಿದೆ – News Alert

0

ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಮಗನಿಗೆ ಅವಮಾನಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 53 ವರ್ಷದ ಮಹದೇವ ನಾಯ್ಕ ನೇಣಿಗೆ ಶರಣಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಮಹದೇವ ಅವರ ಮಗ ಬೆಂಗಳೂರನಲ್ಲಿ ಕೆಲಸ ಮಾಡುತ್ತಿದ್ದು, ಕಳೆದ 8 ದಿನಗಳ ಹಿಂದೆ ಗ್ರಾಮಕ್ಕೆ ಹಿಂದಿರುಗಿದ್ದ. ಗ್ರಾಮಸ್ಥರ ಒತ್ತಾಯದ ಮೇರೆಗೆ ಟೆಸ್ಟ್ ಮಾಡಿಸಲಾಗಿತ್ತು. ಈ ಸಂದರ್ಭದಲ್ಲಿ ಸೋಂಕು ಇರುವುದು ಖಚಿತವಾಗಿತ್ತು.

ಹೀಗಾಗಿ ಆ ವ್ಯಕ್ತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಇವರ ಕುಟುಂಬಸ್ಥರಿಗೆ ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ತಂದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮಗ ಆರೋಪಿಸಿದ್ದಾರೆ.

LEAVE A REPLY

Please enter your comment!
Please enter your name here