ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಲು ಸ್ಪಂದಿಸದ ಖಾಸಗಿ ಆಸ್ಪತ್ರೆಗಳು,
ಬೇಡ್ ಇಲ್ಲ ಎಂದು ರೋಗಿಗೆ ಅಲೆದಾಡಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹೀಗೆಂದು ದಾವಣಗೆರೆ ಜಿಲ್ಲಾಧಿಕಾರಿ ಮುಂದೆ ತಮ್ಮ ಅಳಲನ್ನು ತೊಡಿಕೊಂಡರು
ಇಂದು ಕೋವಿಡ್ ರೋಗಿಗಳ ಆರೋಗ್ಯ ವಿಚರಿಸಲು ಜಿಲ್ಲಾಧಿಕಾರಿ ಜಿಲ್ಲಾಸ್ಪತ್ರೆಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸ್ಥಳದಲ್ಲೆ ಇದ್ದ ಅನಾರೋಗ್ಯದಿಂದ ಬಳಲುತ್ತಿದ್ದ ಕೋವಿಡ್ ಅಲ್ಲದ ರೋಗಿಯ ಸಂಬಂಧಿಯೋಬ್ಬರು ಜಿಲ್ಲಾಧಿಕಾರಿ ಮುಂದೆ ತಮಗಾದ ನೋವನ್ನು ಹೇಳಿಕೊಳ್ಳುತ್ತ ಗಳ ಗಳನೆ ಕಣ್ಣಿರು ಹಾಕುತ್ತ ಜಿಲ್ಲಾಧಿಕಾರಿಯ ಕಾಲಿಗೆ ಬೀಳಲು ಹೋದರು ಜಿಲ್ಲಾಧಿಕಾರಿಗಳು ಸಮಾದಾನ ಪಡಿಸಿ “ನಾನು ಇದ್ದೆನೆ” ನಿಮಗಾಗಿ ಕೆಲಸ ಮಾಡುತ್ತಿದ್ದೆನೆ ಎಂದು ಭರವಸೆ ನೀಡಿದರು, ಖಾಸಗಿ ಆಸ್ಪತ್ರೆಗಳ ವಿರುದ್ದ ಕಾನೂನು ಕ್ರಮಕೈಗೊಳ್ಳುವೆ ಎಂದು ಭರವಸೆ ನೀಡಿದರು.