ಜಿಲ್ಲಾ ಮಟ್ಟದಲ್ಲಿ ವಸ್ತುಗಳನ್ನು ಖರೀದಿಸುತ್ತಿಲ್ಲ: ಆರೋಗ್ಯ ಇಲಾಖೆ ಸ್ಪಷ್ಟನೆ

0

ಕೋವಿಡ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಪಿಪಿಇ ಕಿಟ್, ಇಂಜೆಕ್ಷನ್, ಮಾತ್ರೆ, ಸ್ಯಾನಿಟೈಸರ್, ಮಾಸ್ಕ್ ಮತ್ತಿತರವನ್ನು ಸರ್ಕಾರ ಒದಗಿಸುತ್ತಿದ್ದು, ಜಿಲ್ಲಾ ಮಟ್ಟದಲ್ಲಿ ಯಾವುದೇ ವಸ್ತುಗಳನ್ನು ಖರೀದಿ ಮಾಡುತ್ತಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಹಾಗೂ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಕಾರ್ಯಪ್ಪ ಅವರು ಸ್ಪಷ್ಟಪಡಿಸಿದ್ದಾರೆ.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

ಕೋವಿಡ್ ಪಾಸಿಟಿವ್‍ನಿಂದ ಆಸ್ಪತ್ರೆಯಲ್ಲಿ ದಾಖಲಾಗಿರುವವರಿಗೆ ಊಟೋಪಚಾರಕ್ಕೆ ಒಬ್ಬರಿಗೆ ಒಂದು ದಿನಕ್ಕೆ 250 ರೂ. ಬಳಸಲು ಅವಕಾಶವಿದೆ. ಆದರೆ ಜಿಲ್ಲೆಯಲ್ಲಿ ಟೆಂಡರ್ ಆಹ್ವಾನಿಸಲಾಗಿದ್ದು, ಒಬ್ಬ ವ್ಯಕ್ತಿಗೆ ಒಂದು ದಿನಕ್ಕೆ 170 ರೂ. ಖರ್ಚು ಮಾಡಲಾಗುತ್ತದೆ. ಕೋವಿಡ್-19 ಸಂಬಂಧಿಸಿದಂತೆ ಆರೋಗ್ಯ ತಪಾಸಣೆಯಿಂದ ಹಿಡಿದು ಎಲ್ಲಾ ರೀತಿಯ ಆರೋಗ್ಯ ಸೌಲಭ್ಯವು ಉಚಿತವಾಗಿದ್ದು, ಯಾರೂ ಸಹ ಒಂದು ರೂಪಾಯಿ ಖರ್ಚು ಮಾಡುವಂತಿಲ್ಲ ಎಂದು ಅವರು ಹೇಳಿದರು.

ಕೋವಿಡ್-19 ಸಂಬಂಧಿಸಿದಂತೆ ಹೆಚ್ಚಿನ ಜ್ವರ, ಕೆಮ್ಮು ಇದ್ದವರನ್ನು ಮಾತ್ರ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳಲಾಗುತ್ತದೆ. ಉಳಿದಂತೆ ಕೋವಿಡ್ ಪಾಸಿಟಿವ್ ಬಂದಿರುವ ಸುಸ್ಥಿರವಾಗಿರುವವರನ್ನು ಹೋಂ ಕ್ವಾರಂಟೈನ್‍ಗೆ ಕಳುಹಿಸಲಾಗುತ್ತದೆ ಎಂದು ಕೆ.ಮೋಹನ್ ಅವರು ಸ್ಪಷ್ಟಪಡಿಸಿದರು.

ಹೋಂ ಐಸೋಲೇಷನ್‍ನಲ್ಲಿ ಇರುವವರನ್ನು ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಪಿಡಿಒ ಗಳು ಗಮನಿಸುತ್ತಾರೆ ಎಂದು ಅವರು ವಿವರಿಸಿದರು.

LEAVE A REPLY

Please enter your comment!
Please enter your name here