ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್‌ಪಿ) ತಿರುಚುವಿಕೆ ದಂಧೆ ನಡೆಯುತ್ತಿರುವುದಾಗಿ ಆರೋಪಿಸಿ ಮುಂಬೈ ಪೋಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಟಿಆರ್‌ಪಿ ಯಾವ ಟಿವಿ ಕಾರ್ಯಕ್ರಮಗಳನ್ನು ಜನರು ಹೆಚ್ಚು ವೀಕ್ಷಿಸುತ್ತಾರೆ ಎಂಬುದನ್ನು ನಿರ್ಣಯಿಸುವ ಸಾಧನವಾಗಿದೆ ಹಾಗು ನಿರ್ದಿಷ್ಟ ಚಾನಲ್‌ನ ವೀಕ್ಷಕರ ಆಯ್ಕೆ ಮತ್ತು ಜನಪ್ರಿಯತೆಯನ್ನು ಇದು ಸೂಚಿಸುತ್ತದೆ.
ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಮುಂಬೈ ಪೊಲೀಸರು ಮತ್ತು ಮಹಾರಾಷ್ಟ್ರ ಸರ್ಕಾರದ ಮೇಲೆ ನಡೆಸಿದ ದಾಳಿಯ ಬಗ್ಗೆ ರಿಪಬ್ಲಿಕ್ ಟಿವಿ ಚಾನಲ್ ಟಿಆರ್‌ಪಿ ದಂಧೆಯಲ್ಲಿ ಭಾಗಿಯಾಗಿದೆ ಎಂದು ಮುಂಬೈ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು.
ಟಿಆರ್‌ಪಿ ದಂಧೆಯನ್ನು ಪತ್ತೆ ಹಚ್ಚಿದ ಮುಂಬೈ ಸಿಸಿಬಿ ಪೊಲೀಸರು ಎರಡು ಮರಾಠಿ ಚಾನೆಲ್‌ಗಳ ಮಾಲೀಕರನ್ನು ಬಂಧಿಸಿದ್ದಾಗಿ ಅಧಿಕಾರಿ ತಿಳಿಸಿದ್ದಾರೆ. ಈ ರಾಷ್ಟ್ರೀಯ ಸುದ್ದಿ ವಾಹಿನಿಯು ಟಿಆರ್‌ಪಿ ದಂಧೆಯಲ್ಲಿ ಭಾಗಿಯಾಗಿದೆ. ಇದಕ್ಕೆ ಕಾರಣರಾದ ವ್ಯಕ್ತಿಗಳನ್ನು ಸಹ ಬಂಧಿಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಈ ಚಾನೆಲ್‌ಗಳ ಬ್ಯಾಂಕ್ ಖಾತೆಗಳನ್ನೂ ಸಹ ಪರಿಶೀಲಿಸಲಾಗುತ್ತಿದೆ ಮತ್ತು ಟಿಆರ್‌ಪಿ ದಂಧೆಯಲ್ಲಿ ಭಾಗಿಯಾದವರ ಜನರನ್ನು ಪ್ರಕರಣದ ಹೆಚ್ಚಿನ ತನಿಖೆಗಾಗಿ ಪೊಲೀಸರು ಕರೆಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಹಿಂದುಸ್ತಾನ ಸಮಾಚಾರ.ಎಂ.ಎಸ್.ಯ.ಮ