ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನ

0

ಜಿಲ್ಲೆಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಖಾಲಿ ಉಳಿದಿರುವ ಸಿವಿಲ್, ಕಂಪ್ಯೂಟರ್ ಸೈನ್ಸ್, ಎಲೆಕ್ಟಾçನಿಕ್ಸ್ ಕಮ್ಯುನಿಕೇಶನ್ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸುಗಳಿಗೆ ಪ್ರವೇಶ ಪಡೆಯಲು ಇಚ್ಛಿಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಥಮ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಅ. 15ರೊಳಗೆ ಪಾಲಿಟೆಕ್ನಿಕ್‌ನಲ್ಲಿಯೇ ಅರ್ಜಿ ಪಡೆದು ಡಿಪ್ಲೊಮಾ ಅರ್ಜಿ ನೋಂದಣಿ ಶುಲ್ಕವನ್ನು (ಸಾಮಾನ್ಯ/2ಎ/3ಬಿ/3ಎ/3ಬಿ ರೂ. 100 ಹಾಗೂ ಪ.ಜಾ/ಪ.ಪಂ/ಪ್ರವರ್ಗ-1 ರೂ. 50) ನಗದು ರೂಪದಲ್ಲಿ ಪಾವತಿಸಿ ಎಲ್ಲಾ ಮೂಲ ದಾಖಲೆಗಳ ಜೆರಾಕ್ಸ್ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸುವುದು.

ತಾಂತ್ರಿಕ ಶಿಕ್ಷಣ ಇಲಾಖೆಯಡಿಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ 2020-21ನೇ ಸಾಲಿನ ಪ್ರಥಮ ಸೆಮಿಸ್ಟರ್‌ಗೆ ಆನ್‌ಲೈನ್ ಇಂಟರಾಕ್ಟೀವ್ ಕೌನ್ಸಿಲಿಂಗ್ ಮೂಲಕ ಡಿಪ್ಲೊಮಾ ಪ್ರವೇಶದ ನಂತರ ಪಾಲಿಟೆಕ್ನಿಕ್‌ಗಳಲ್ಲಿ ಖಾಲಿ ಉಳಿದಿರುವ ಡಿಪ್ಲೊಮಾ ಕೋರ್ಸುಗಳ ಸೀಟುಗಳಿಗೆ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರ ಹಂತದಲ್ಲಿಯೇ ಆಫ್‌ಲೈನ್ ಮೂಲಕ ಭರ್ತಿ ಮಾಡಲು ಅನುಮತಿ ನೀಡಿರುತ್ತಾರೆ.

ಹೆಚ್ಚಿನ ಮಾಹಿತಿಗೆ ಸರ್ಕಾರಿ ಪಾಲಿಟೆಕ್ನಿಕ್, ರಾಮನಗರ ಇಲ್ಲಿ ಸಂಪರ್ಕಿಸುವಂತೆ ರಾಮನಗರದ ಸರ್ಕಾರಿ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸದ್ದಾರೆ.

LEAVE A REPLY

Please enter your comment!
Please enter your name here