ಡಿಪ್ಲೋಮಾ ಪ್ರವೇಶಾತಿಗೆ ಅವಧಿ ವಿಸ್ತರಣೆ

0

ಹಾಸನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನಲ್ಲಿ 2020-21ನೇ ಸಾಲಿನ ಡಿಪ್ಲೋಮಾ ಪ್ರವೇಶಾತಿಯ ಪ್ರಥಮ ವರ್ಷಕ್ಕೆ ಆಫ್‍ಲೈನ್ ಮೂಲಕ ಪ್ರವೇಶಕ್ಕಾಗಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆ ಹೊಂದಿರುವ ಮಳೆಯರಿಗಾಗಿ 3 ವರ್ಷದ ಡಿಪ್ಲೋಮಾ ಇನ್ ಕರ್ಮಷಿಯಲ್ ಪ್ರಾಕ್ಟೀಸ್, ಫ್ಯಾಷನ್ ಡಿಸೈನಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ಸ್ ಇಂಜಿನಿಯರಿಂಗ್, ಲೈಬ್ರರಿ ಅಂಡ್ ಇನ್‍ಫರ್‍ಮೇಷನ್ ಸೈನ್ಸ್ ಕೋರ್ಸುಗಳ ಬಾಕಿ ಉಳಿದಿರುವ ಸೀಟುಗಳಿಗೆ ಪ್ರವೇಶಾತಿಯನ್ನು ಅ. 15 ವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅ. 15 ರೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು ಹೆಚ್ಚಿನ ಮಾಹಿತಿಗಾಗಿ ದೂ. 08172-262201, 268349ಗೆ ಸಂಪರ್ಕಿಸಬಹುದಾಗಿದೆ ಎಂದು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಪ್ರಾಚಾರ್ಯರಾದ ಡಾ. ಮಹದೇವ ಪ್ರಸಾದ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here