ಡ್ರಗ್ಸ್ ಪ್ರಕರಣದಲ್ಲಿ ತಮ್ಮ ಪಾತ್ರ ಸಾಬೀತಾದರೆ ಆಸ್ತಿಯನ್ನೆಲ್ಲಾ ಸರ್ಕಾರಕ್ಕೆ ಕೊಡುತ್ತೇನೆ: ಜಮೀರ್ ಅಹ್ಮದ್ ಸವಾಲು

0

ಬೆಂಗಳೂರು: ಡ್ರಗ್ಸ್ ನಂಟಿಗೆ ಸಂಬಂಧಿಸಿದಂತೆ ತಮ್ಮ ಮೇಲಿನ ಆರೋಪವನ್ನು ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ತಳ್ಳಿಹಾಕಿದ್ದಾರೆ.

ಒಂದು ವೇಳೆ ಪ್ರಕರಣದಲ್ಲಿ ತಮ್ಮ ಪಾತ್ರ ಇರುವುದು ಸಾಬೀತಾದರೆ ತಮ್ಮ ಆಸ್ತಿಯನ್ನೆಲ್ಲಾ ಸರ್ಕಾರಕ್ಕೆ ಬರೆದುಕೊಟ್ಟುಬಿಡುವುದಾಗಿ ಹೇಳಿದ್ದಾರೆ.

ತಮ್ಮ ಮೇಲಿನ ಆರೋಪ ಸತ್ಯಕ್ಕೆ ದೂರವಾಗಿದ್ದು, ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗೃಹಸಚಿವರ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹ್ಮದ್, ಫಾಜಿಲ್ ನಾಲ್ಕು ವರ್ಷದ ಹಿಂದೆ ತಮಗೆ ಪರಿಚಯವಾಗಿದ್ದರು, ಈಗ ಅವರ ಸಂಪರ್ಕಹೊಂದಿಲ್ಲ. ಹೀಗೆ ಬಂದು ಮಾತನಾಡಿಸಿ ಹೋಗುವವರನ್ನೆಲ್ಲಾ ಆಪ್ತರು ಎಂದು ಹೇಳಲು ಸಾಧ್ಯವಿಲ್ಲ ಎಂದರು.

ಈ ಹಿಂದೆ ಬಿಎಸ್ ಯಡಿಯೂರಪ್ಪನವರು ಮತ್ತೆ ರಾಜ್ಯದ ಸಿಎಂ ಆದರೆ ನಾನು ಅವರ ಮನೆ ಮುಂದೆ ವಾಚ್ ಮ್ಯಾನ್ ಆಗಿ ಕೆಲಸ ಮಾಡುತ್ತೇನೆ ಎಂದು ಸವಾಲು ಹಾಕಿದ್ದರು. ನಂತರ ಯಡಿಯೂರಪ್ಪ ಸಿಎಂ ಆದ ನಂತರ ಜಮೀರ್ ಟ್ರೋಲ್ ಗೆ ಗುರಿಯಾಗಿದ್ದರು.

LEAVE A REPLY

Please enter your comment!
Please enter your name here