ನಕಲಿ ‘ದೆಹಲಿ ಪೊಲೀಸ್ ಆಫೀಸರ್’ ಅರೆಸ್ಟ್

0

ನವದೆಹಲಿ: ಕೋವಿಡ್ – 19 ಮಾನದಂಡಗಳನ್ನು ಉಲ್ಲಂಘಿಸಿದವರಿಗೆ ದಂಡ ವಿಧಿಸುತ್ತಿದ್ದ ನಕಲಿ ಪೊಲೀಸ್​​ಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಆಕೆ ತಾನು ದೆಹಲಿ ಪೊಲೀಸ್ ಸಂಸ್ಥೆಯ ಅಸಿಸ್ಟೆಂಟ್ ಸಬ್​​ಇನ್​​ಸ್ಪೆಕ್ಟರ್ ಎಂದು ಹೇಳಿಕೊಂಡಿದ್ದಳು. ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿಸಿರುವುದಾಗಿ ನಗರ ಪೊಲೀಸರು ತಿಳಿಸಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಇದೇ ರೀತಿಯ ಘಟನೆಯಲ್ಲಿ ಉತ್ತರ ಪ್ರದೇಶದ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಯಾಗಿ ನಟಿಸಿದ 38 ವರ್ಷದ ಭದ್ರತಾ ಸಿಬ್ಬಂದಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದರು.
ಆತ ಮಹಿಳೆಯರಿಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಮತ್ತು ಸರ್ಕಾರಿ ಉದ್ಯೋಗಗಳನ್ನು ನೀಡುವ ಹುಸಿ ಭರವಸೆ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಕಿರುಕುಳ ಸೇರಿದಂತೆ ವಿವಿಧ ಆರೋಪಗಳ ಮೇಲೆ ಆತನನ್ನು ಗುರುಗ್ರಾಮದ ಹಳ್ಳಿಯಿಂದ ಬಂಧಿಸಲಾಯಿತು. ಆರೋಪಿಯನ್ನು ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಗೌರಿ ಶಂಕರ್ ಎಂದು ಗುರುತಿಸಲಾಗಿದೆ.

LEAVE A REPLY

Please enter your comment!
Please enter your name here