ನಟ ಪವನ್ ಕಲ್ಯಾಣ್ ಕಟೌಟ್ ಕಟ್ಟುವ ವೇಳೆ ವಿದ್ಯುತ್ ತಗುಲಿ ಮೂವರು ಅಭಿಮಾನಿಗಳು ಸಾವು

0

ತೆಲುಗಿನ ಪವರ್ ಸ್ಟಾರ್, ಜನ ಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರ ಜನ್ಮದಿನವಾದ ಇಂದು, ನೆಚ್ಚಿನ ನಟನ ಜನ್ಮದಿನ ಆಚರಿಸಲು ಬ್ಯಾನರ್ ಕಟ್ಟುತ್ತಿದ್ದ ವೇಳೆ ವಿದ್ಯುತ್ ಶಾಕ್ ಆಗಿ ಮೂವರು ಅಭಿಮಾನಿಗಳು ಸಾವನ್ನಪ್ಪಿದ್ದ ಘಟನೆ ಕಳೆದ ರಾತ್ರಿ ನಡೆದಿದೆ.

ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಸೋಮಶೇಖರ್ (30), ಆತನ ಸಹೋದರ ರಾಜೇಂದ್ರ (32) ಮತ್ತು ಗೆಳೆಯ ಅರುಣಾಚಲಂ (28 ವ) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

ನಟ, ರಾಜಕಾರಣಿ ಪವನ್ ಕಲ್ಯಾಣ್ ಹುಟ್ಟುಹಬ್ಬ ಪ್ರಯುಕ್ತ ಇವರುಗಳು ನಟನ ಹೆಸರಿನಲ್ಲಿ ಬ್ಯಾನರ್ ಅಳವಡಿಸುತ್ತಿದ್ದರು. ಈ ವೇಳೆ ಅಕಸ್ಮಾತ್ ಅಗಿ ಬ್ಯಾನರ್ ವಿದ್ಯುತ್ ತಂತಿಗೆ ತಗುಲಿದ್ದು, ದುರ್ಘಟನೆ ಸಂಭವಿಸಿದೆ.

ಘಟನೆಯ ಬಗ್ಗೆ ಜನ ಸೇನಾ ಪಕ್ಷ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಸೂಚಿಸಿದೆ.

LEAVE A REPLY

Please enter your comment!
Please enter your name here