ನಾಗಮಂಗಲ ಪುರಸಭೆ ಹಾಗೂ ಬೆಳ್ಳೂರು ಪಟ್ಟಣ ಪಂಚಾಯಿತಿ ಕಚೇರಿ ಸೀಲ್ ಡೌನ್.
ನಾಗಮಂಗಲ: ಪುರಸಭೆ ಕಚೇರಿಯಲ್ಲಿ ಕಾರ್ಯನಿರ್ವಹಿಸವ 7 ಮಂದಿ ಹಾಗೂ ಬೆಳ್ಳೂರು ಪಟ್ಟಣ ಪಂಚಾಯತಿಯ ಕಾರ್ಯನಿರ್ವಹಿಸುವ ಒಬ್ಬರಿಗೆ ಕೋವಿಡ್-19 ಸೋಂಕು ದೃಢ ಹಿನ್ನೆಲೆಯಲ್ಲಿ ಪುರಸಭೆ ಕಚೇರಿ ಹಾಗೂ ಬೆಳ್ಳೂರು ಪಟ್ಟಣ ಪಂಚಾಯಿತಿ ಕಚೇರಿ ಸೀಲ್ ಡೌನ್ ಮಾಡಲಾಯಿತು.
ಪುರಸಭೆ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ದ್ವಿತೀಯ ದರ್ಜೆ ಸಹಾಯಕ ನೋರ್ವನಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶನಿವಾರ ಕೋವಿಡ್-19 ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಇರುವುದು ದೊಡ್ಡ ಪಟ್ಟಿದೆ. ತಕ್ಷಣ ಮುಖ್ಯ ಅಧಿಕಾರಿ ಕೃಷ್ಣ ಪ್ರಸಾದ್, ರವರು ಸೋಂಕಿತ ವ್ಯಕ್ತಿ ಜೊತೆ ಸಂಪರ್ಕದಲ್ಲಿದ್ದ ಕಚೇರಿಯ ಸಿಬ್ಬಂದಿಗಳಿಗೆ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಯಿತು. ಅದರಲ್ಲಿ ಆರೋಗ್ಯ ನಿರೀಕ್ಷಕರು ಪರಿಸರ ನಿರೀಕ್ಷಕರು ಪ್ರಥಮ ದರ್ಜೆ ಸಹಾಯಕರು ಸೇರಿದಂತೆ ಏಳು ಜನ ಸಿಬ್ಬಂದಿಗಳಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಳ್ಳೂರು ಪಟ್ಟಣ ಪಂಚಾಯಿತಿ ಕಾರ್ಯನಿರ್ವಹಿಸುವ ಆರೋಗ್ಯ ನಿರೀಕ್ಷಕಿ ಒಬ್ಬರಿಗೆ ಕೋವಿಡ್-19 ಸೋಂಕು ಧೃಡ ಪಟ್ಟಿದೆ.
ಸಿಬ್ಬಂದಿಗಳಿಗೆ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ
ಸೋಂಕಿತ ವ್ಯಕ್ತಿಗಳು ಕಾರ್ಯನಿರ್ವಹಿಸುತ್ತಿದ್ದ ಕಚೇರಿ ಹಾಗೂ ವಾಸವಿದ್ದ ಮನೆ ಮತ್ತು ಬೀದಿಗೆ ಸ್ಯಾನಿಟೈಸರ್ ಮಾಡಿಸಿ ಸುತ್ತಮುತ್ತಲಿನ ಪ್ರದೇಶವನ್ನು ಸಂಪೂರ್ಣ ಸೀಲ್ ಡೌನ್ ಮಾಡಿಸಿದ್ದಾರೆ. ಸೋಂಕಿತರ ಕುಟುಂಬಸ್ಥರನ್ನು ಹಾಗೂ ಪ್ರಾಥಮಿಕ ಸಂಪರ್ಕದ ವ್ಯಕ್ತಿಗಳನ್ನು ಗುರುತಿಸಿ ಹೋಂ ಕ್ವಾರೆಂಟೇನ್ ಒಳಪಡಿಸಲಾಯಿತು.
ವರದಿ: ದೇ.ರಾ .ಜಗದೀಶ ನಾಗಮಂಗಲ