ನಾಳಿನ ‘ಕರ್ನಾಟಕ ಬಂದ್’ಗೆ ಅನುಮತಿ ಕೊಟ್ಟಿಲ್ಲ – ನಗರ ಪೊಲೀಸ್ ಆಯುಕ್ತ ಕಮಲ್ ಪಂತ್

0

ನಾಳೆ ರೈತ ಸಂಘಟನೆಗಳು ಕರೆ ನೀಡಿರುವಂತ ಬಂದ್ ಗೆ ನಾವು ಯಾರಿಗೂ ಅನುಮತಿ ನೀಡಿಲ್ಲ. ಹೀಗಾಗಿ ಬಲವಂತವಾಗಿ ಪ್ರತಿಭಟನೆಗೆ ಇಳಿದ್ರೇ, ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಕೊರೋನಾ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಉಲ್ಲಂಘಿಸುವವರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ( ಎನ್ ಡಿ ಎಂ ಎ) ಅಡಿ ಪ್ರಕರಣ ದಾಖಲಿಸಲಾಗುತ್ತದೆ ಎಂಬುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಅವರು, ನಾಳೆ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ನಾವು ಯಾವುದೇ ರೀತಿಯ ಅನುಮತಿಯನ್ನು ನೀಡಿಲ್ಲ. ಹೀಗಾಗಿ ಪ್ರತಿಭಟನೆಗೆ ಅನುಮತಿ ಇಲ್ಲದೇ ಇರುವ ಕಾರಣ, ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸುವಂತಿಲ್ಲ. ಪ್ರತಿಭಟನೆಗೆ ಕರೆ ನೀಡಿರುವವರಿಂದ ಬಾಂಡ್ ಬರೆಸಿಕೊಳ್ಳುತ್ತೇವೆ. ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿಯಾದರೇ ಅವರೇ ಹೊಣೆ ಹೊರಬೇಕಾಗುತ್ತದೆ ಎಂಬುದಾಗಿ ತಿಳಿಸಿದರು.

ಇನ್ನೂ ಮುಂದುವರೆದು ಮಾತನಾಡಿದ ಅವರು, ನಾಳಿನ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ 47 ಕೆ ಎಸ್ ಆರ್ ಪಿ ತುಕಡಿ, 26 ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ ಎಂಬುದಾಗಿ ಹೇಳಿದರು.

LEAVE A REPLY

Please enter your comment!
Please enter your name here