ನಾಳೆ ಯಲಹಂಕ ಮೇಲ್ಸೇತುವೆ ಉದ್ಘಾಟನೆ, ‘ವೀರಸಾರ್ವಕರ್’ ನಾಮಕರಣ

0

ತೀವ್ರ ವಿವಾದಕ್ಕೆ ಗುರಿಯಾಗಿದ್ದ ಯಲಹಂಕ ಮೇಲ್ಸೇತುವೆ ನಾಮಕರಣ ನಾಳೆ ನಡೆಯಲಿದೆ. ಈಗಾಗಲೇ ನಿಗದಿಯಾಗಿರುವಂತೆ ಇಲ್ಲಿನ ಮೇಲ್ಸೇತುವೆಗೆ ಆರ್‍ಎಸ್‍ಎಸ್ ಮುಖಂಡ ವೀರಸಾರ್ವಕರ್ ಎಂದು ನಾಮಕರಣ ಮಾಡಲು ಸರ್ಕಾರ ತೀರ್ಮಾನಿಸಿದೆ.

ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಮೇಲ್ಸೇತುವೆಯನ್ನು ಆನ್‍ಲೈನ್ ಮೂಲಕ ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಪ್ರಮುಖ ಸಚಿವರು ಹಾಗೂ ಶಾಸಕರು ಭಾಗವಹಿಸಲಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಯಾವುದೇ ದೊಡ್ಡ ಮಟ್ಟದ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸುವಂತಿಲ್ಲ ಎಂದು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದೆ.

ಹೀಗಾಗಿ ಮೇಲ್ಸುತೇವೆ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಆನ್‍ಲೈನ್ ಮೂಲಕವೇ ಉದ್ಘಾಟನೆ ನೆರವೇರಿಸಲಿದ್ದಾರೆ. ಈ ಹಿಂದೆ ಮೇಲ್ಸೇತುವೆಗೆ ವೀರ್ ಸಾರ್ವಕರ್ ಎಂದು ನಾಮಕರಣ ಮಾಡಲು ಮುಂದಾದಾಗ ತೀವ್ರ ವಿವಾದ ಉಂಟಾಗಿತ್ತು.

ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಸಾರ್ವಜನಿಕ ವಲಯದ ಪ್ರಮುಖರು ಸಾರ್ವಕರ್ ಹೆಸರಿಡುವ ಸರ್ಕಾರದ ಕ್ರಮವನ್ನು ಬಹಿರಂಗವಾಗಿಯೇ ವಿರೋಧಿಸಿದ್ದರು. ಸಾರ್ವಕರ್ ಬದಲು ಕರ್ನಾಟಕದ ಪ್ರಮುಖ ನಾಯಕರೊಬ್ಬರ ಹೆಸರಿಡುವಂತೆ ಒತ್ತಾಯಿಸಿದ್ದರು.

ಆದರೆ ಇದಾವುದಕ್ಕೂ ತಲೆಕೆಡಿಸಿಕೊಳ್ಳದ ಸರ್ಕಾರ ಯಲಹಂಕ ಮೇಲ್ಸೇತುವೆಗೆ ಸಾರ್ವಕರ್ ಹೆಸರಿಡಲು ತೀರ್ಮಾನಿಸಿತು.ಅಲ್ಲದೆ ಬಿಬಿಎಂಪಿಯಲ್ಲೂ ಈ ಬಗ್ಗೆ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಇದೀಗ ನಾಳೆ ಮೇಲ್ಸೇತುವೆ ಅಧಿಕೃತವಾಗಿ ಉದ್ಘಾಟನೆಯಾಗಲಿದೆ.

LEAVE A REPLY

Please enter your comment!
Please enter your name here