ನೀಟ್, ಜೆಇಇ ಪರೀಕ್ಷೆ ಎದುರಿಸಲು ವಿದ್ಯಾರ್ಥಿಗಳು ಪ್ರಾಣ ಪಣಕ್ಕಿಡಬೇಕೆ? – ಸಿದ್ದರಾಮಯ್ಯ

0

ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ನಡೆಸಲು ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ತೆಗೆದುಕೊಳ್ಳಲು ತಮ್ಮ ಪ್ರಾಣವನ್ನು ಪಣಕ್ಕಿಡಬೇಕೆ? ಎಂದು ಪ್ರಶ್ನಿಸಿದ್ದಾರೆ.

ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡಬೇಕೆಂದು ಕೋರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷಗಳ ಮಾತಿಗೆ ದನಿಗೂಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಎಲ್ಲರ ವಿರೋಧದ ಹೊರತಾಗಿಯೂ ಬಿಜೆಪಿ ಸರ್ಕಾರ ನೀಟ್ ಮತ್ತು ಜೆಇಇ ನಡೆಸುವ ನಿರ್ಧಾರಕ್ಕೆ ಅಂಟಿಕೊಂಡಿದೆ. ಕೋವಿಡ್ 19 ಪ್ರಕರಣಗಳು ದೇಶದಲ್ಲಿ ವೇಗವಾಗಿ ಹರಡುತ್ತಿದೆ. ವಿದ್ಯಾರ್ಥಿಗಳು ಅಪಾಯಕ್ಕೆ ಒಡ್ಡಿಕೊಳ್ಳುವಂತೆ ಒತ್ತಾಯಿಸಲಾಗುತ್ತಿದೆ. ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅವರು ತಮ್ಮ ಪ್ರಾಣವನ್ನು ಪಣಕ್ಕಿಡಬೇಕೆ? ಎಂದು ಪ್ರಶ್ನಿಸಿದ್ದಾರೆ.

ಸರ್ಕಾರದ ನಿರ್ಧಾರವನ್ನು ತಿರಸ್ಕರಿಸಿದ ಸಿದ್ದರಾಮಯ್ಯ ಪ್ರಯಾಣವು ವಿದ್ಯಾರ್ಥಿಗಳಿಗೆ ಸುರಕ್ಷಿತವಲ್ಲ, ಪರೀಕ್ಷಾ ಕೇಂದ್ರವಿರುವ ನಗರಗಳಲ್ಲಿ ವಸತಿ ಕಷ್ಟಕರ. ಸಾರ್ವಜನಿಕ ಸಾರಿಗೆ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿಲ್ಲ ಮತ್ತು ಇನ್ನೂ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬರೆಯಲು ಆಸಕ್ತಿ ತೋರುವುದಿಲ್ಲ ಎಂದೂ ಹೇಳಲಾಗುತ್ತಿದೆ.

ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಯುವ ವಿದ್ಯಾರ್ಥಿಗಳ ಬಗ್ಗೆ ಹೆಚ್ಚು ಸೂಕ್ಷ್ಮವಾಗಿರಬೇಕು ಮತ್ತು ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here