ನೆರೆ ಹಾನಿ ಪರಿಶೀಲನೆ : ಸೆ.7 ರಂದು ರಾಜ್ಯಕ್ಕೆ ಕೇಂದ್ರ ಅಧ್ಯಯನ ತಂಡ ಆಗಮನ

0

ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ನೆರೆ ಹಾನಿ ಪರಿಶೀಲನೆಗಾಗಿ ಕೇಂದ್ರದ ಅಧ್ಯಯನ ತಂಡ ಸೆ.7 ರಂದು ರಾಜ್ಯಕ್ಕೆ ಭೇಟಿ ನೀಡಲಿದೆ.

ಹೌದು. ಸೆ.7 ರಂದು ರಾಜ್ಯಕ್ಕೆ ಆಗಮಿಸಲಿರುವ ವಿಶೇಷ ತಂಡ ಎರಡು ಮೂರು ದಿನ ರಾಜ್ಯದ ನೆರೆಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಸಮಗ್ರ ಮಾಹಿತಿ ಕಲೆ ಹಾಕಲಿದೆ.ಇದಕ್ಕೂ ಮುನ್ನ ತಂಡ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಲಿದೆ ಎಂದು ತಿಳಿದು ಬಂದಿದೆ.

ಕೇಂದ್ರ ಗೃಹ ಸಚಿವಾಲಯದ ಜಂಟಿ ನಿರ್ದೇಶಕ ಕೆ.ಬಿ.ಪ್ರತಾಪ್ ನೇತೃತ್ವದ ಆರು ಜನ ಅಧಿಕಾರಿಗಳ ತಂಡ ರಾಜ್ಯಕ್ಕೆ ಆಗಮಿಸಲಿದೆ ಎಂದು ಹೇಳಲಾಗುತ್ತಿದೆ. ಅಧಿಕಾರಿಗಳ ತಂಡಕ್ಕೆ ರಾಜ್ಯದಲ್ಲಿ ಆದ ಹಾನಿ ಬಗ್ಗೆ ವರದಿ ತಯಾರಿಸಲಿದೆ.

LEAVE A REPLY

Please enter your comment!
Please enter your name here