ಪಕ್ಷಕ್ಕೆ ಸೇರ್ಪಡೆಯಾದ ಬೆನ್ನಲ್ಲೇ ‘ಕರ್ನಾಟಕ ಸಿಂಗಂ’ ಖ್ಯಾತಿಯ ಅಣ್ಣಾಮಲೈಗೆ ಬಿಜೆಪಿಯಿಂದ ಭರ್ಜರಿ ಗಿಫ್ಟ್

0

ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿದ್ದ ಕರ್ನಾಟಕ ಸಿಂಗಂ ಖ್ಯಾತಿಯ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರಿಗೆ ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ.

ಆಗಸ್ಟ್ 25 ರಂದು ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಯಾಗಿದ್ದು ಅವರಿಗೆ ನಿರೀಕ್ಷೆಯಂತೆ ತಮಿಳುನಾಡು ಬಿಜೆಪಿ ಘಟಕದಲ್ಲಿ ಉನ್ನತ ಸ್ಥಾನ ನೀಡಲಾಗಿದೆ. ತಮಿಳುನಾಡಿನಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು ಇದಕ್ಕೆ ಪೂರಕವಾಗಿ ಅವರಿಗೆ ಪ್ರಮುಖ ಹುದ್ದೆ ನೀಡಲಾಗಿದೆ. ಅಣ್ಣಾಮಲೈ ಪಕ್ಷ ಸಂಘಟನೆಯಲ್ಲಿ, ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎನ್ನಲಾಗಿದೆ.

ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್. ಮುರುಗನ್, ಪಕ್ಷದ ಉಪಾಧ್ಯಕ್ಷರಾದ ಅಣ್ಣಾಮಲೈ ಯಶಸ್ವಿಯಾಗಲಿದ್ದಾರೆ ಎಂದು ವಿಶ್ವಾಸವ್ಯಕ್ತಪಡಿಸಿದ್ದಾರೆ. ಇನ್ನು ಕೊಯಮತ್ತೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಣ್ಣಾಮಲೈ ಲಾಕ್ಡೌನ್ ನಿಯಮ ಉಲ್ಲಂಘಿಸಿ ಅಧಿಕ ಜನರನ್ನು ಸೇರಿಸಿದ್ದಾರೆ ಎನ್ನುವ ಆರೋಪದ ಮೇಲೆ ಅಣ್ಣಾಮಲೈ ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here