ಪತ್ರಕರ್ತರ ಮೇಲಿನ ಹಲ್ಲೆ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರರಿಗೆ ಮನವಿ

0

ಪತ್ರಕರ್ತರ ಮೇಲಿನ ಹಲ್ಲೆ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರರಿಗೆ ಮನವಿ

ರೋಣ :ಬೆಂಗಳೂರಿನಲ್ಲಿ ದಿನಾಂಕ:11.08.2020 ರ ರಾತ್ರಿ ಕೆ.ಜಿ. ಹಳ್ಳಿ ಮತ್ತು ಡಿ.ಜೆ. ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಗಲಭೆಯನ್ನು ವರದಿ ಮಾಡಲು ಹೋದ ಮಾಧ್ಯಮದವರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದನ್ನು ಖಂಡಿಸಿ ರೋಣ ಕಾರ್ಯನಿರತ ಪತ್ರಕರ್ತರ ಸಂಘದ
ವತಿಯಿಂದ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ರೋಣ ತಹಸೀಲ್ದಾರರಾದ ಜಿ ಜಿ ಜಕ್ಕನಗೌಡ್ರ ರವರೆಗೆ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಪತ್ರಕರ್ತರಾದ ರವಿ ಕೊಪ್ಪದ,ಪ್ರಕಾಶ ಗುದ್ನೇಪ್ಪನವರ ಮಹೇಶ ಅಚ್ಚಿನಗೌಡ್ರ,ಅಪ್ಪಣ್ಣ ಕಿರೇಸೂರ ಚಂದ್ರಕಾಂತ ನೆಲ್ಲೂರ ಪಾಲ್ಗೊಂಡಿದ್ದರು

LEAVE A REPLY

Please enter your comment!
Please enter your name here