ಪತ್ರಕರ್ತರ ಹತ್ಯೆ ಪ್ರಕರಣ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

0

ಪತ್ರಕರ್ತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ರಾಜ್ಯದಲ್ಲಿ ಪತ್ರಕರ್ತರ ಸ್ವಾತಂತ್ರ್ಯ ಮತ್ತು ಸುರಕ್ಷತೆ ವಿಚಾರವಾಗಿ ಕಳವಳ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ತಿಂಗಳಲ್ಲಿ ಮೂವರು ಪತ್ರಕರ್ತರ ಹತ್ಯೆ ನಡೆದಿದ್ದು, 11 ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ದೂರಿದ್ದಾರೆ.

‘ಜೂನ್‌ 19 ರಂದು ಶುಭಾಮ್‌ ಮಣಿ ತ್ರಿಪಾಠಿ, ಜುಲೈ 20 ರಂದು ವಿಕ್ರಂ ಜೋಶಿ, ಆಗಸ್ಟ್‌ 24 ರಂದು ರತನ್‌ ಸಿಂಗ್‌ ಅವರನ್ನು ಹತ್ಯೆ ಮಾಡಲಾಗಿದೆ. ಮೂರು ತಿಂಗಳಲ್ಲಿ ಮೂವರು ಪತ್ರಕರ್ತರನ್ನು ಕೊಲ್ಲಲಾಗಿದೆ. 11 ಪತ್ರಕರ್ತರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ. ಪತ್ರಕರ್ತರ ಸುರಕ್ಷತೆ ಮತ್ತು ಸ್ವಾತಂತ್ರ್ಯದ ವಿಚಾರದಲ್ಲಿ ಸರ್ಕರದ ನಡೆ ದುರದೃಷ್ಟಕರವಾದದ್ದು’ ಎಂದು ಟ್ವೀಟ್‌ ಮಾಡಿದ್ದಾರೆ.

ಇದಕ್ಕೂ ಮೊದಲು, ಸರ್ಕಾರದ ವೇಗಕ್ಕಿಂತಲೂ ಕ್ರೈಂ ರೇಟ್‌ ಹೆಚ್ಚಳವಾಗಿದೆ ಎಂದು ಹೇಳಿದ್ದರು. ‘ರಾಜ್ಯದಲ್ಲಿ ಅಪರಾಧ ಪ್ರಕರಣಗಳ ದರ ದ್ವಿಗುಣವಾಗಿದೆ. ಇದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಬದ್ಧತೆಯನ್ನು ತೋರಿಸುತ್ತದೆ’ ಎಂದು ಕಿಡಿಕಾರಿದ್ದಾರೆ.

ಬಲ್ಲಿಯಾ ಜಿಲ್ಲೆಯಲ್ಲಿ ಹತ್ಯೆಯಾಗಿದ್ದ ರತನ್‌ ಸಿಂಗ್‌ ಕೊಲೆ ಪ್ರಕರಣ ಸಂಬಂಧ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ.

LEAVE A REPLY

Please enter your comment!
Please enter your name here