ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಸ್ಥಾಪನೆಗೆ ರಣಕಹಳೆ ಮೊಳಗಿಸಿದ ಅಭಿಮಾನಿಗಳು

0

ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಸರ್ಕಾರವೇ ಪ್ರತಿಷ್ಠಾಪನೆ ಮಾಡಬೇಕು ಎಂದು ಆಗ್ರಹಿಸಿ ರಾಯಣ್ಣನ ಸಾವಿರಾರು ಅಭಿಮಾನಿಗಳು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

ಆಗಸ್ಟ್ 15ರಂದು ಬೆಳಗಾವಿಯ ಪೀರನವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವುದಕ್ಕೆ ಪೊಲೀಸರು ತಡೆ ಹಿಡಿದಿದ್ದರು. ಇದು ರಾಯಣ್ಣ ಅಭಿಮಾನಿಗಳ ಆಕ್ರೋಷಕ್ಕೆ ಕಾರಣವಾಗಿತ್ತು. ಹೀಗಾಗಿ ಸೋಮವಾರ ಜಿಲ್ಲಾ ಕುರುಬರ ಸಂಘ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಮತ್ತು ರಾಯಣ್ಣನ ಅಭಿಮಾನಿಗಳು ಪೀರನವಾಡಿಯಿಂದ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು.

ಕಾಂಗ್ರೆಸ್ ರಸ್ತೆ, ಖಾನಾಪುರ ರೋಡ್, ಧರ್ಮವೀರ್ ಸಂಭಾಜಿ ಸರ್ಕಲ್, ಕಾಲೇಜ್ ರೋಡ್, ಕಿತ್ತೂರು ರಾಣಿ ಚನ್ನಮ್ಮ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದರು. ಈ ವೇಳೆ ಚನ್ನಮ್ಮ ವೃತ್ತದಲ್ಲಿ ಕೆಲ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದ ರಾಯಣ್ಣನ ಅಭಿಮಾನಿಗಳು ಪೀರನವಾಡಿಯಲ್ಲಿ ರಾಯಣ್ಣನ ಮೂರ್ತಿಯನ್ನು ಸರ್ಕಾರವೇ ಪ್ರತಿμÁ್ಠಪನೆ ಮಾಡಬೇಕು, ಇಲ್ಲವಾದಲ್ಲಿ ಮೂರ್ತಿ ಪ್ರತಿμÁ್ಠಪನೆ ಮಾಡಲು ಅಭಿಮಾನಿಗಳಿಗೆ ಅನುಮತಿ ನೀಡಬೇಕೆಂದು ಒತ್ತಾಯಿಸಿದರು.

ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ರಾಯಣ್ಣನ ಸಾವಿರಾರು ಅಭಿಮಾನಿಗಳು ಡಿಸಿ ಕಚೇರಿ ಗೇಟ್ ಮುಂದೆಯೂ ಬೃಹತ್ ಪ್ರತಿಭಟನೆ ನಡೆಸಿದರು. ಈ ವೇಳೆ ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ಮಾತನಾಡಿ ಬ್ರಿಟಿಷರ ವಿರುದ್ಧ ಹೋರಾಡಿ ತಮ್ಮ ಪ್ರಾಣವನ್ನೆ ಬಲಿ ಕೊಟ್ಟ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಪೀರನವಾಡಿಯಲ್ಲಿ ಪ್ರತಿಷ್ಠಾಪನೆ ಮಾಡಲು ಅವಕಾಶ ನೀಡದೇ ಇರುವುದು ಅತ್ಯಂತ ಖಂಡನೀಯ. ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಬಾರಿಸಲಾಗಿದ್ದು. ತಕ್ಷಣವೇ ಸರ್ಕಾರವೇ ಮೂರ್ತಿ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.
ಇನ್ನೊರ್ವ ರಾಯಣ್ಣನ ಅಭಿಮಾನಿಗಳು ಮಾತನಾಡಿ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡುವ ಕೆಲಸವನ್ನು ಪೊಲೀಸರು ಮಾಡಿದ್ದಾರೆ. ತಕ್ಷಣವೇ ಸರ್ಕಾರ ಪೀರನವಾಡಿಯಲ್ಲಿ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು ಎಂದು ಒತ್ತಾಯಿಸಿದರು.

ರಾಯಣ್ಣನ ಮಹಿಳಾ ಅಭಿಮಾನಿಗಳು ಮಾತನಾಡಿ ರಾಯಣ್ಣ ಎಂದು ವಡಗಾವಿ ಪೊಲೀಸರಿಗೆ ಗೊತ್ತೆ ಇಲ್ಲ. ಎಷ್ಟೇ ಮನವಿ ಮಾಡಿಕೊಂಡರು ಕೂಡ ವಡಗಾವಿ ಪೊಲೀಸ್ ಠಾಣೆಯಲ್ಲಿ ರಾಯಣ್ಣನ ಒಂದು ಫೋಟೋ ಕೂಡ ಹಾಕಿಲ್ಲ ಎಂದು ಗ್ರಾಮೀಣ ಎಸಿಪಿ ಶಿವರೆಡ್ಡಿ ವಿರುದ್ಧ ಆಕ್ರೋಷ ವ್ಯಕ್ತಪಡಿಸಿ, ರಾಯಣ್ಣನ ಮೂರ್ತಿ ಸ್ಥಾಪಿಸುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಒಟ್ಟಾರೆ ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ಸರ್ಕಾರ ಮತ್ತು ಪೊಲೀಸರ ವಿರುದ್ಧ ರಣಕಹಳೆ ಮೊಳಗಿಸಿದ್ದು. ಇನ್ಮುಂದೆಯಾದ್ರೂ ಜಿಲ್ಲಾಡಳಿತ ಮತ್ತು ಸರ್ಕಾರ ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿ ಸ್ಥಾಪಿಸಲು ಮುಂದಾಗುತ್ತಾರಾ ಎಂದು ಕಾಯ್ದು ನೋಡಬೇಕಿದೆ.

ಪ್ರತಿನಿದಿ ಮಹಾಂತೇಶ ಹುಲಿಕಟ್ಟಿ

LEAVE A REPLY

Please enter your comment!
Please enter your name here