ಪುತ್ರನ ಸ್ನೇಹಿತನ ಬಿಜೆಪಿಗೆ ಕಳಿಸಿ ದಾಳವಾಗಿ ಬಳಕೆ: ಮಾಜಿ ಸಿಎಂ ಸಿದ್ದರಾಮಯ್ಯಗೆ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು

0

ಜೆಡಿಎಸ್ ಒಂದು ರಾಜಕೀಯ ಪಕ್ಷವೇ ಅಲ್ಲ, ಬೆಂಬಲ ಪಡೆದು ಅಧಿಕಾರಕ್ಕೆ ಬರುವ ಪಕ್ಷ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ವೈಯಕ್ತಿಕ ನೆಲೆಯಲ್ಲಿ ಸ್ನೇಹ ವಿಶ್ವಾಸವೇ ಬೇರೆ, ಆದರೆ ಉಪ-ಚುನಾವಣೆ ಘೋಷಣೆಯಾದ ನಂತರ ಪುತ್ರನ ಸ್ನೇಹಿತನನ್ನು ದಾಳವಾಗಿ ಬಳಸಿಕೊಂಡು ಮತ್ತೊಂದು ಪಕ್ಷಕ್ಕೆ ಕಳುಹಿಸುವ ಜಾಯಮಾನ ನನ್ನದಲ್ಲ ಎಂದು ಹೇಳಿದ್ದಾರೆ.

ಉಪ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಆರೋಪಿಸುವ ಸಿದ್ದರಾಮಯ್ಯ ಅವರ ಬಳಿ ಇದಕ್ಕೆ ಯಾವ ಸಾಕ್ಷಿ ಇದೆ? ದೋಸ್ತಿ ದಾಳವನ್ನು ರಾಜಕೀಯವಾಗಿ ಬಳಸಿಕೊಂಡು ತಾವು ಬೆಳೆದ ಪಕ್ಷಗಳಿಗೆ ಕುತ್ತು ತರುವ ಚಾಳಿ ಅವರಿಗೆ ಹೊಸದೇನಲ್ಲ ಎಂದು ಹೇಳಿದ್ದಾರೆ.

ನನಗೂ ಪಕ್ಷಾತೀತವಾಗಿ ಹಿರಿಯರು-ಕಿರಿಯರು ಸ್ನೇಹಿತರಿದ್ದಾರೆ. ಪವಿತ್ರ ಸ್ನೇಹವನ್ನು ನಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿಲ್ಲ. ಆದರೆ ಸಿದ್ದರಾಮಯ್ಯನವರಿಗೆ ಇದೊಂದು ಅಂಟು ಜಾಡ್ಯ ಎಂಬುದನ್ನು ಸಾಬೀತು ಪಡಿಸುತ್ತಲೇ ಬಂದಿದ್ದಾರೆ. ಉಪ-ಚುನಾವಣೆ ಘೋಷಣೆಯಾದ ನಂತರ ಪುತ್ರನ ಗೆಳೆಯನನ್ನು ಬಿಜೆಪಿಗೆ ಕಳುಹಿಸಿರುವ ಮರ್ಮವನ್ನು ಕಾಂಗ್ರೆಸ್ಸಿಗರೂ ಬಲ್ಲರು ಎಂದು ಹೆಚ್.ಡಿ.ಕೆ. ಹೇಳಿದ್ದಾರೆ.

LEAVE A REPLY

Please enter your comment!
Please enter your name here