ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮೂರು ಕೃಷಿ ವಲಯದ ಮಸೂದೆಗಳನ್ನು ಅಂಗೀಕರಿಸಿದ ನಂತರ ಹತ್ತಾರು ರೈತ ಸಂಘಟನೆಗಳು ತೀವ್ರ ಹೋರಾಟ ನಡೆಸುವುದಾಗಿ ಘೋಷಿಸಿವೆ.
ಈ ಹಿನ್ನೆಲೆ ಸಿಎಂ ಯಡಿಯೂರಪ್ಪ ಅವರು ಇಂದು ರೈತ ಮುಖಂಡರ ಜೊತೆ ಸಭೆ ನಡೆಸಿದ್ದಾರೆ.
ಸಿಎಂ ಬಿಎಸ್ವೈಅವರ ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಪ್ರತಿಭಟನೆ ಕೈಬಿಡುವಂತೆ ರೈತ ಮುಖಂಡರ ಮನವೊಲಿಕೆಗೆ ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಅವರು ಭೂ ಸುಧಾರಣೆ ಕಾಯ್ದೆ ಬಗ್ಗೆ ರೈತರಿಗೆ ಮನದಟ್ಟು ಮಾಡಿದರು. ಕಾಯ್ದೆಯಿಂದ ರೈತರಿಗೆ ಯಾವೆಲ್ಲಾ ಅನುಕೂಲ ಆಗಲಿದೆ. ರೈತರ ರಕ್ಷಣೆ ಬಗ್ಗೆ ಸರ್ಕಾರ ಮಾಡಿರುವ ಕ್ರಮಗಳ ಮೂಲಕ ರೈತರನ್ನು ಮನವೊಲಿಸುವ ಪ್ರಯತ್ನ ಮಾಡಿದರು. ಅಲ್ಲದೇ ರೈತರು ಇದೀಗ ನಡೆಸುತ್ತಿರುವ ಪ್ರತಿಭಟನೆಯನ್ನು ಕೈ ಬಿಡುವಂತೆ ಒತ್ತಾಯಿಸಿದ್ದಾರೆ ಎಂದು ಹೇಳಲಾಗಿದೆ.