ಪ್ರತಿಭಟನೆ ಮಾಡಿ ರೋಗಿಗಳಿಗೆ ತೊಂದರೆ ಕೊಡದಂತೆ ವೈದ್ಯರಿಗೆ ಸಚಿವ ಸುಧಾಕರ್ ಮನವಿ

0

ಮೈಸೂರಿನ ಡಿಎಚ್‍ಓ ಕಚೇರಿ ಮುಂದೆ ಪ್ರತಿಭಟಿಸುತ್ತಿರುವ ವೈದ್ಯ ಸಿಬ್ಬಂದಿಗೆ ನನ್ನದೊಂದು ಕಳಕಳಿಯ ಮನವಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ ಕೊರೋನ ಸಂಕಷ್ಟ ಕಾಲದಲ್ಲಿ ಪ್ರತಿಭಟನೆ ಮಾಡಿ ರೋಗಿಗಳಿಗೆ ತೊಂದರೆ ಮಾಡಬೇಡಿ. ‘ವೈದ್ಯೋ ನಾರಾಯಣೋಹರಿಃ’ ಎಂದು ನಂಬಿರುವ ಜನರ ಸೇವೆಗೆ ಮುಂದಾಗಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಈಗಾಗಲೇ ಆರೋಗ್ಯಾಧಿಕಾರಿ ನಾಗೇಂದ್ರ ಸಾವಿನ ಬಗ್ಗೆ ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಿ 7 ದಿನಗಳೊಳಗೆ ವರದಿ ನೀಡಲು ಮೈಸೂರಿನ ಪ್ರಾದೇಶಿಕ ಆಯುಕ್ತರನ್ನು ನೇಮಿಸಲಾಗಿದೆ. ಆದರೂ ತಾವು ಈ ರೀತಿ ಪ್ರತಿಭಟನೆ ಮಾಡುವುದು ಸರಿಯಲ್ಲ. ವರದಿ ಬಂದ ತಕ್ಷಣವೇ ಯಾರೇ ತಪ್ಪಿತಸ್ಥರಾಗಿದ್ದರೂ ಸರಿ ಕ್ರಮ ಕೈಗೊಳ್ಳುಲಾಗುವುದು ಎಂದು ಭರವಸೆ ನೀಡಿದ್ದಾರೆ.

ನಾಗೇಂದ್ರ ಅವರ ಸಾವಿನ ವಿಷಯದಲ್ಲಿ ಸರಕಾರಕ್ಕೆ ಯಾರನ್ನೂ ರಕ್ಷಿಸುವ ಇಚ್ಛೆಯಿಲ್ಲ. ಯಾರೇ ತಪ್ಪು ಮಾಡಿದರೂ ಅದಕ್ಕೆ ಕ್ಷಮೆಯಿಲ್ಲ. ಪ್ರತಿಭಟಿಸುವುದನ್ನು ನಿಲ್ಲಿಸಿ. ಕಾರ್ಯಪ್ರವೃತ್ತರಾಗಿ ರೋಗಿಗಳ ಸಂಕಷ್ಟಕ್ಕೆ ನೆರವಾಗಿ. ಜನ ಸೇವೆಯೇ ಜನಾರ್ಧನ ಸೇವೆ. ತನಿಖೆಯ ನಂತರ ಸತ್ಯ ತಿಳಿದೇ ತಿಳಿಯುತ್ತದೆ ಎಂದು ಸುಧಾಕರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here