ಪ್ರಧಾನಿ ನರೇಂದ್ರ ಮೋದಿ ವ್ಯಕ್ತಿಯಲ್ಲ, ದೇವಮಾನವ : ಸಿಎಂ ಬಿಎಸ್ ವೈ ಗುಣಗಾನ

0

ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ವ್ಯಕ್ತಿಯಲ್ಲ, ರಾಜರ್ಷಿ, ದೇವಮಾನವ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಗುಣಗಾನ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿದ್ದ ನರೇಂದ್ರ ಮೋದಿ ವ್ಯಕ್ತಿ, ವ್ಯಕ್ತಿತ್ವ, ಜೀವನ ಕುರಿತು ವರ್ಚುವಲ್ ಸಭೆಯ ಅಧ್ಯಕ್ಷತೆ ವಹಿಸಿಕೊಂಡು ಸಿಎಂ ಬಿ.ಎಸ್. ಯಡಿಯೂರಪ್ಪ ಬೆಂಗಳೂರಿನ ತಮ್ಮ ಕಾವೇರಿ ನಿವಾಸದಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ಜಾಗತಿಕ ಮನ್ನಣೆ ತಂದು ಕೊಟ್ಟಿದ್ದು, ಜನ ಮೆಚ್ಚಿದ ಮಹಾನ್ ನಾಯಕ್ ಎಂದು ಹೇಳಿದರು.

ಪ್ರಧಾನಿ ಮೋದಿ ಅವರನ್ನು ಮೊನ್ನೆ ಭೇಟಿಯಾಗಿದ್ದು ತುಂಬಾ ಸಂತಸ ತಂದಿದೆ. ಭೇಟಿ ವೇಳೆ ಅವರು ರಾಜ್ಯ ಹಾಗೂ ಬೆಂಗಳೂರು ಅಭಿವೃದ್ಧಿ ಬಗ್ಗೆ ಅವರದ್ದೇ ಆದ ಕಲ್ಪನೆಗಳು ಇರುವುದನ್ನು ಕೇಳಿ ಅಚ್ಚರಿಯಾಯಿತು ಎಂದರು.

LEAVE A REPLY

Please enter your comment!
Please enter your name here