ಪ್ರವಾಹದ ಹಿನ್ನಲೆಯಲ್ಲಿ ಯಡೂರಗೆ ಚಿಕ್ಕೊಡಿ ಸಂಸದರ ಭೇಟಿ…!

0

ಯಡೂರ
ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಬರುವ ಯಡೂರ (ಡೋಣಿ) ಗ್ರಾಮದ ನದಿ ತೀರಕ್ಕೆ ಅಧಿಕಾರಿಗಳೊಂದಿಗೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ನೀಡಿ, ಪ್ರವಾಹ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತಾಗಿ ಅವಶ್ಯಕವಾದ ಸಲಹೆ, ಸೂಚನೆಗಳನ್ನು ನೀಡಿದರು.

ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಸರ್ಕಾರ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದು, ಯಾರು ಆತಂಕಕ್ಕೆ ಒಳಗಾಗದೇ ಸುರಕ್ಷಿತವಾಗಿರುವಂತೆ ಜನರಲ್ಲಿ ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀ ಎಂ.ಜಿ ಹಿರೇಮಠ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಲಕ್ಷ್ಮಣ ನಿಂಬರಗಿ, ಉಪವಿಭಾಗಾಧಿಕಾರಿಗಳಾದ ಶ್ರೀ ರವೀಂದ್ರ ಕರಲಿಂಗನ್ನವರ, ತಹಶೀಲ್ದಾರ್ ಶ್ರೀ ಸುಭಾಷ ಸಂಪಗಾವಿ, ಡಿ.ವೈ.ಎಸ್.ಪಿ ಶ್ರೀ ಮನೋಜಕುಮಾರ ನಾಯಿಕ, ಸಿಪಿಐ ಶ್ರೀ ಆರ್ ಆರ್ ಪಾಟೀಲ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here