ಪ್ರವಾಹ ಕೊಚ್ಚಿಹೋದ ಇಬ್ಬರು ವ್ಯಕ್ತಿಗಳ ಕುಟುಂಬಗಳಿಗೆ ತಲಾ5 ಲಕ್ಷ ರೂ.ಪರಿಹಾರ

0

ಪ್ರವಾಹ ಕೊಚ್ಚಿಹೋದ ಇಬ್ಬರು ವ್ಯಕ್ತಿಗಳ ಕುಟುಂಬಗಳಿಗೆ ತಲಾ5 ಲಕ್ಷ ರೂ.ಪರಿಹಾರ

ಧಾರವಾಡ ( ಕರ್ನಾಟಕ ವಾರ್ತೆ) ಸೆ.16:

ಅಣ್ಣಿಗೇರಿ ತಾಲ್ಲೂಕಿನ ಬಲ್ಲರವಾಡ ಗ್ರಾಮದಲ್ಲಿ ಬೆಣ್ಣೆಹಳ್ಳದ ಪ್ರವಾಹದಿಂದಾಗಿ ಕೊಚ್ಚಿಹೋದ ಶ್ರೀಕಾಂತರಡ್ಡಿ ಇನಾಮತಿ ಹಾಗೂ ದೇವೆಂದ್ರಪ್ಪ ಯಮನಪ್ಪ ಮಾದರ ಅವರ ಕುಟುಂಬಗಳಿಗೆ ಇಂದು ತಲಾ 5 ಲಕ್ಷ ರೂ.ಪರಿಹಾರ ನೀಡಲಾಯಿತು.

ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಅವರು ಮೃತರ ವಾರಸುದಾರರಾದ ಅನಸೂಯಾ ಶ್ರೀಕಾಂತರಡ್ಡಿ ಇನಾಮತಿ ಹಾಗೂ ಸಾವಕ್ಕ ಮಾದರ ಇವರಿಗೆ ತಲಾ 5 ಲಕ್ಷ ರೂ ಗಳ ಪರಿಹಾರ ಧನದ ಚೆಕ್ ನೀಡಿ, ಬೆಣ್ಣೆಹಳ್ಳ ವೀಕ್ಷಿಸಿದರು.

ಹುಬ್ಬಳ್ಳಿ ಗ್ರಾಮೀಣ ತಹಶಿಲ್ದಾರ ಪ್ರಕಾಶ ನಾಶಿ,ಅಣ್ಣಿಗೇರಿ ತಹಶಿಲ್ದಾರ ಕೊಟ್ರೇಶ, ನವಲಗುಂದ ತಹಶಿಲ್ದಾರ ನವೀನ ಹುಲ್ಲೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here