ಬಿಗ್ ನ್ಯೂಸ್ : ಹತ್ರಾಸ್ ಪ್ರಕರಣದ ಬೆನ್ನಲ್ಲೇ ಮತ್ತೊಂದು ಅಮಾನವೀಯ ಪ್ರಕರಣ.!

0

ಉತ್ತರಪ್ರದೇಶದಲ್ಲಿನ ಹತ್ರಾಸ್ ಗ್ರಾಮದಲ್ಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಹಸಿ ಹಸಿಯಾಗಿರುವಾಗಲೇ, ಮತ್ತೊಂದು ಅಮಾನವೀಯ ಘಟನೆ ಉತ್ತರ ಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯಲ್ಲಿ ನಡೆದಿದೆ. ತುಂಡರಿಸಿದ ರೀತಿಯಲ್ಲಿ ಅಪ್ರಾಪ್ತೆಯ ಶವ ಪತ್ತೆಯಾಗಿದೆ.

ಉತ್ತರ ಪ್ರದೇಶದ ಹತ್ರಾಸ್ ಗ್ರಾಮದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನೆ ಹಸಿಯಾಗಿರುವಾಗಲೇ, ಕಾನ್ಪುರ್ ದೇಹತ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಸೆ.26ರಂದು ನಾಪತ್ತೆಯಾಗಿದ್ದಂತ 15 ವರ್ಷದ ಅಪ್ರಾಪ್ತೆ, ಇದೀಗ ತುಂಡರಿಸಿದ ಸ್ಥಿತಿಯಲ್ಲಿ ಶವವಾಗಿ ದೊರೆತಿದ್ದಾಳೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದಂತ ಪೊಲೀಸರು, ಪ್ರಕರಣ ಸಂಬಂಧ ಹುಡುಗಿಯ ಕುಟುಂಬದ ಇಬ್ಬರು ಸಂಬಂಧಿಕರನ್ನು ಬಂಧಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಅಪ್ರಾಪ್ತೆಯ ಮೃತ ದೇಹದ ಭಾಗಗಳನ್ನು ರವಾನಿಸಿದ್ದಾರೆ.

ಇತ್ತ ಅಪ್ರಾಪ್ತೆಯ ಪೋಷಕರು ತಮ್ಮ ಮಗಳ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗಿದೆ ಎಂಬುದಾಗಿ ಆರೋಪಿಸಿದ್ದಾರೆ. ಸದ್ಯಕ್ಕೆ ಪ್ರಕರಣ ದಾಖಲಿಸಿಕೊಂಡಿರುವಂತ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here