ಬಿಜೆಪಿ ಹಿರಿಯ ನಾಯಕ ಅಡ್ವಾಣಿ, ಮುರಳಿ ಮನೋಹರ ಜೋಶಿ ಭವಿಷ್ಯ ನಾಳೆ ನಿರ್ಧಾರ

0

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 27 ವರ್ಷಗಳ ಬಳಿಕ ನಾಳೆ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಲಿದ್ದು, ಬಿಜೆಪಿ ಹಿರಿಯ ನಾಯಕರಾದ ಎಲ್.‌ ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾ ಭಾರತಿ ಸೇರಿದಂತೆ ಹಲವರ ಭವಿಷ್ಯ ನಿರ್ಧಾರವಾಗಲಿದೆ.

ಈಗಾಗಲೇ ಪ್ರಕರಣದ ಕುರಿತ ವಾದ-ಪ್ರತಿವಾದಗಳು ಮುಗಿದಿದ್ದು, ಸೆ.16ರಂದು ಸಿಬಿಐ ನ್ಯಾಯಾಧೀಶ ಎಸ್.ಕೆ. ಯಾದವ್, ಸೆ. 30ಕ್ಕೆ ತೀರ್ಪು ಕಾಯ್ದಿರಿಸಿದ್ದರು. ಈ ಹಿನ್ನೆಲೆಯಲ್ಲಿ ನಾಳೆ ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ. ಅಡ್ವಾಣಿ, ಮುರಳಿಮನೋಹರ ಜೋಶಿ, ಕಲ್ಯಾಣ್ ಸಿಂಗ್, ಉಮಾ ಭಾರತಿ, ಸೇರಿದಂತೆ ಪ್ರಕರಣದ ಎಲ್ಲಾ 32 ಆರೋಪಿಗಳು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ನಿರ್ದೇಶನ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಾಳೆ ಎಲ್ಲಾ ಆರೋಪಿಗಳು ಕೋರ್ಟ್ ಗೆ ಹಾಜರಾಗಲಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ಕೆಡವಿ ಅಲ್ಲಿ ಬಾಬ್ರಿ ಮಸೀದಿ ನಿರ್ಮಿಸಲಾಗಿದೆ ಎಂಬ ಕಾರಣಕ್ಕೆ 1992 ಡಿಸೆಂಬರ್ 6ರಂದು ಕರಸೇವಕ ಕಾರ್ಯಕರ್ತರು ಬಾಬ್ರಿ ಮಸೀದಿ ಧ್ವಂಸಗೊಳಿದ್ದರು. ಬಿಜೆಪಿ ಹಿರಿಯ ನಾಯಕರಾದ ಅಡ್ವಾಣಿ, ಜೋಶಿ ಸೇರಿದಂತೆ 32 ಜನರು ಪ್ರಮುಖ ಆರೋಪಿಗಳು ವಿಚಾರಣೆ ಎದುರಿಸುತ್ತಿದ್ದರು. ಪ್ರಕರಣದ ತನಿಖೆ ನಡೆಸಿರುವ ಸಿಬಿಐ 351 ಜನರ ಸಾಕ್ಷ್ಯ ಹಾಗೂ 600 ಸಾಕ್ಷ್ಯ ಚಿತ್ರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ನಾಳೆ ತೀರ್ಪು ಹೊರಬೀಳಲಿದೆ.

27 ವರ್ಷಗಳ ಹಿಂದಿನ ಪ್ರಕರಣದ ತೀರ್ಪು ನಾಳೆ ಹೊರ ಬೀಳಲಿದ್ದು, ಬಿಜೆಪಿ ನಾಯಕರ ಪಾಲಿಗೆ ಮಹತ್ವದ ದಿನವಾಗಿದೆ.

LEAVE A REPLY

Please enter your comment!
Please enter your name here